ಲಕ್ನೋ: ಉತ್ತರ ಪ್ರದೇಶದ ಝಾನ್ಸಿಯ ವೈದ್ಯಕೀಯ ಕಾಲೇಜಿನ ಮಕ್ಕಳ ವಾರ್ಡ್ನಲ್ಲಿ ಮುಂಜಾನೆ ಭಾರಿ ಅಗ್ನಿ ಅವಘಡ ಸಂಭವಿಸಿ 10 ನವಜಾತ ಶಿಶುಗಳು
ಸುಟ್ಟು ಹೋದ ಮನ ಕಲಕುವ ಘಟನೆ ನಡೆದಿದೆ.
ಮಕ್ಕಳ ವಾರ್ಡ್ನ ಕಿಟಕಿ ಒಡೆದು ಹಲವು ಕಂದಮ್ಮಗಳನ್ನು ರಕ್ಷಿಸಲಾಗಿದೆ.ಈ ವಾರ್ಡ್ ನಲ್ಲಿ 54 ಮಕ್ಕಳನ್ನು ಇಡಲಾಗಿತ್ತು.ಅದರಲ್ಲಿ ಹತ್ತುಮಕ್ಕಳು ಸುಟ್ಟು ಕರಕಲಾಗಿವೆ.
ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜು ಬುಂದೇಲ್ಖಂಡದ ದೊಡ್ಡ ಆಸ್ಪತ್ರೆಯಾಗಿದೆ. ಜಿಲ್ಲೆಯ ಅನೇಕ ಕಡೆಗಳಿಂದ ಜನರು ಚಿಕಿತ್ಸೆಗಾಗಿ ಇಲ್ಲಿಗೆ ಬರುತ್ತಾರೆ.ನಿನ್ನೆ ತಡರಾತ್ರಿ ಅವಘಡ ಸಂಭವಿಸಿದೆ.
ಜಿಲ್ಲಾಧಿಕಾರಿ ಮತ್ತು ಉನ್ನತ ಅಧಿಕಾರಿಗಳು ಸ್ಥಳದಲ್ಲೇ ಇದ್ದರು. ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಟ್ಟು ಬೆಂಕಿ ಆರಿಸಿದ್ದಾರೆ.
ತಮ್ಮ ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು, ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಗೊತ್ತಾಗಿದೆ ಎಂಬುದಾಗಿ ಜಿಲ್ಲಾಧಿಕಾರಿ ಅವಿನಾಶ್ ಕುಮಾರ್ ತಿಳಿಸಿದ್ದಾರೆ
54 ನವಜಾತ ಮಕ್ಕಳನ್ನು ಎನ್ಐಸಿಯು ವಾರ್ಡ್ನಲ್ಲಿ ಈ ಅವಘಡದಲ್ಲಿ 10 ಮಕ್ಕಳು ಸಾವನ್ನಪ್ಪಿದ್ದಾರೆ. ಸುಮಾರು 40 ಶಿಶುಗಳನ್ನು ರಕ್ಷಿಸಲಾಗಿದೆ. ಈ ಪೈಕಿ 17ಕ್ಕೂ ಹೆಚ್ಚು ಮಕ್ಕಳ ಸ್ಥಿತಿ ಗಂಭೀರವಾಗಿದೆ ಚಿಕಿತ್ಸೆ ಮುಂದುವರಿದಿದೆ ಎಂದು ಹೇಳಿದರು.
ಘಟನೆ ಬಗ್ಗೆ ಉತ್ತರ ಪ್ರದೇಶ ಮುಖ್ಯ ಮಂತ್ರಿ ಯೋಗಿ ಆದಿತ್ಯನಾಥ್ ಅವಘಡಕ್ಕೆ ಮಮ್ಮಲ ಮರುಗಿದರು. ಉಪ ಮುಖ್ಯಮಂತ್ರಿ ಬ್ರಿಜೇಶ್ ಪಾಠಕ್ ಮತ್ತು ಪ್ರಧಾನ ಕಾರ್ಯದರ್ಶಿಯನ್ನು ಝಾನ್ಸಿಗೆ ಕಳುಹಿಸಲಾಗಿದೆ, ಝಾನ್ಸಿ ಕಮಿಷನರ್ ಮತ್ತು ಡಿಐಜಿಗೆ ಅಪಘಾತದ ತನಿಖೆಗೆ ಆದೇಶಿಸಲಾಗಿದೆ ಎಂದು ತಿಳಿಸಿದರು.
ಮೃತ ಮಕ್ಕಳ ಕುಟುಂಬಕ್ಕೆ ತಲಾ 5 ಲಕ್ಷ ರೂ., ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಪರಿಹಾರವನ್ನು ನೀಡುವುದಾಗಿ ಸರ್ಕಾರ ಹೇಳಿದೆ.
ಉಪ ಮುಖ್ಯಮಂತ್ರಿ ಬ್ರಿಜೇಶ್ ಪಾಠಕ್ ಕೂಡ ವೈದ್ಯಕೀಯ ಕಾಲೇಜಿನ ತುರ್ತು ಚಿಕಿತ್ಸಾ ವಿಭಾಗ ಹಾಗೂ ಮಕ್ಕಳ ವಾರ್ಡ್ಗೆ ತೆರಳಿ ಗಾಯಾಳುಗಳ ಸ್ಥಿತಿಗತಿ ವಿಚಾರಿಸಿದರು.
ಪ್ರಧಾನಿ ನರೇಂದ್ರ ಮೋದಿ, ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಮತ್ತು ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಕೂಡ ಅಪಘಾತದ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ.