ಬೆಂಗಳೂರು: ಈ ಉಪ ಚುನಾವಣೆಯ ಗೆಲುವು 2028ರ ವಿಧಾನಸಭೆ ಚುನಾವಣೆಗೆ ಗೆಲುವಿನ ದಿಕ್ಸೂಚಿ ಯಾಗಿದೆ ಎಂದು ಉಪ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು
ಚನ್ನಪಟ್ಟಣ, ಸಂಡೂರು, ಶಿಗ್ಗಾವಿ ಉಪಚುನಾವಣೆ ಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸು ತ್ತಿದ್ದಂತೆ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಡಿಕೆಶಿ ಮಾತನಾಡಿದರು.
ಚನ್ನಪಟ್ಟಣದಲ್ಲಿ ನಿಖಿಲ್ ಸೋತಿದ್ದಾರೆ ಎಂದು ಹೇಳುವುದಿಲ್ಲ,ಆದರೆ ಕುಮಾರಸ್ವಾಮಿ ವಿರುದ್ಧ ಜನ ತೀರ್ಪು ನೀಡಿದ್ದಾರೆ ಎಂದು ಅಭಿಪ್ರಾಯ ಪಡುತ್ತೇನೆ ಎಂದು ತಿಳಿಸಿದರು.
ಶಿಗ್ಗಾವಿಯಲ್ಲಿ ಭರತ್ ಬೊಮ್ಮಾಯಿ ಸೋಲು ಎಂದು ಹೇಳುವುದಿಲ್ಲ. ಅವರ ತಂದೆ ಬಸವರಾಜ ಬೊಮ್ಮಾಯಿ ಅವರದ್ದು ಎಂದು ಹೇಳಬಯಸುತ್ತೇನೆ ಎಂದರು.
ವಿಪಕ್ಷಗಳು ನಮ್ಮ ಗ್ಯಾರಂಟಿಯನ್ನು ಟೀಕೆ ಮಾಡಿದ್ದವು.ಇನ್ನಾದರೂ ಟೀಕೆ ಮಾಡುವುದನ್ನು ಬಿಡಿ ಎಂದು ಜನ ತೀರ್ಪು ಕೊಟ್ಟಿದ್ದಾರೆ. ಜನರ ಬದುಕಿನ ಮೇಲೆ ರಾಜಕೀಯ ಮಾಡಬೇಡಿ ಅಂತ ಸಂದೇಶ ಕೊಟ್ಟಿದ್ದಾರೆ. ಟೀಕೆಗಳು ಸಾಯುತ್ತವೆ, ಕೆಲಸ ಉಳಿಯತ್ತವೆ. ಇದು ಮತ್ತೊಮ್ಮೆ ಸಾಬೀತಾಗಿದೆ ಎಂದು ತಿಳಿಸಿದರು.
ಜನರಿಗೆ ಸರಿಯಾಗಿ ಗ್ಯಾರಂಟಿ ಹೋಗುತ್ತಿಲ್ಲ ಎಂದು ವಿಪಕ್ಷಗಳು ಆರೋಪಿಸಿವೆ. 56 ಸಾವಿರ ಕೋಟಿ ರೂಗಳನ್ನ ಗ್ಯಾರಂಟಿ ಗೆ ಕೊಟ್ಟಿದ್ದೇವೆ. ಪ್ರತಿ ಕ್ಷೇತ್ರಕ್ಕೆ 200 ಕೋಟಿ ರೂ. ಹಣ ಹೋಗಿದೆ. ಇದೆಲ್ಲವು ಅಭಿವೃದ್ಧಿ ಅಲ್ಲವೇ ಎಂದು ಡಿ.ಕೆ.ಶಿವಕುಮಾರ್ ಪ್ರಶ್ನಿಸಿದರು.