ನವದೆಹಲಿ: ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರು ತೀವ್ರ ಅನಾರೋಗ್ಯದಿಂದಾಗಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.
97 ವರ್ಷದ ಎಲ್.ಕೆ ಅಡ್ವಾಣಿ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದಾರೆ.ಹಾಗಾಗಿ ದೆಹಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ
ಎಲ್.ಕೆ ಅಡ್ವಾಣಿ ಅವರನ್ನು ತಜ್ಞ ವೈದ್ಯರ ನಿಗಾದಲ್ಲಿ ಇರಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.