ಜಮೀರ್ ವಿರುದ್ಧ ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಮೈಸೂರು: ಕರಿಯಾ, ಕುಳ್ಳ ಎಂದು ಮಾತಾಡಿಸಿ ಕೊಳ್ಳುವ ಸಂಸ್ಕೃತಿಯಿಂದ ನಾನು ಬಂದವನಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಚಿವ ಜಮೀರ್ ಗೆ ತಿರುಗೇಟು ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಜಮೀರ್ ಮಾತುಗಳು ಅವರ ಸಂಸ್ಕೃತಿ ತೋರಿಸುತ್ತದೆ ಎಂದು ಹೇಳಿದರು.

ಹಿಂದೆ ಬಸವರಾಜ್ ಹೊರಟ್ಟಿ ಅವರು ನನ್ನನ್ನ ಕುಮಾರ ಎಂದಾಗ ಅವರನ್ನು ಹೊಡೆಯಲು ಹೋದ ಗಿರಾಕಿ ಇವರು,ಹೊರಟ್ಟಿ ಅವರು ಈಗಲೂ ಇದ್ದಾರಲ್ಲಾ ಅವರನ್ನೇ ಕೇಳಿ ಬೇಕಾದರೆ. ಅವತ್ತು ಅವರನ್ನು ಹೊಡೆಯಲು ಇವರು ಹೋಗಿರಲಿಲ್ವಾ ಅಂತಾ ಎಂದು ಹೆಚ್ ಡಿ ಕೆ ತಿಳಿಸಿದರು.

ಸಿಎಂ ಹಾಗೂ ಡಿಸಿಎಂ ಇಬ್ಬರು ಜಮೀರ್ ಮಾತಗಳನ್ನ ಸಮರ್ಥಿಸಿಕೊಂಡಿದ್ದಾರೆ.

ಇದು ನಾಗರೀಕ ಸರ್ಕಾರ ನಾ,ಇಂಥ ಮಾತು ಹೇಳಿದವರ ಮೇಲೆ ಎಷ್ಟು ಕೇಸ್ ಹಾಕಿ ಜೈಲಿಗೆ ಹಾಕಿಲ್ಲ ಈ ಸರಕಾರ ಈಗ ಯಾಕೆ ಸುಮ್ಮನೆ ಇದೆ ಎಂದು ಕಾರವಾಗಿ ಪ್ರಶ್ನಿಸಿದರು.

ಸಿಎಂ ಗೆ ದೇವೇಗೌಡರು ಗರ್ವ ಭಂಗ ಮಾಡ್ತಿನಿ, ಸೊಕ್ಕು ಮುರಿತ್ತಿನಿ ಅನ್ನೋದು ಮಾನನಷ್ಟ ಹೇಳಿಕೆನಾ, ನಾನು ಯಾವತ್ತೂ ಅವರನ್ನು ಕುಳ್ಳ ಎಂದು ಕರೆದಿಲ್ಲ, ನಮ್ಮ ಸ್ನೇಹ ಇದ್ದದ್ದು ರಾಜಕೀಯವಾಗಿ ಅಷ್ಟೆ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ದುಡ್ಡಿನ ಮದದಿಂದ ಈ ರೀತಿ ಮಾತಾಡುತ್ತಿದ್ದಾರೆ,ಆಡಲಿ ಎಂದರು.

ಸರ್ಕಾರ ಬೀಳಿಸಲು 50 ಕೋಟಿ ಆಫರ್ ವಿಚಾರ‌ಕ್ಕೆ ಪ್ರತಿಕ್ರಿಯಿಸಿದ ಹೆಚ್ ಡಿ ಕೆ,

ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಬಫೂನ್ ರೀತಿ ಇದೆ ಎಂದು ಗೇಲಿ ಮಾಡಿದರು.

50 ಕೋಟಿ 50 ಜನರಿಗೆ ಅಂಥ ನಿಖರವಾಗಿ ಹೇಳುತ್ತಿದ್ದಾರೆ.ಈ ಸರ್ಕಾರ ಪ್ರತಿಯೊಂದಕ್ಕು ಎಸ್ಐಟಿ ತನಿಖೆ ಮಾಡಿಸುತ್ತಿದ್ದಾರೆ.ಇದನ್ನೂ ಎಸ್ಐಟಿ ಕೊಟ್ಟು ತನಿಖೆ ಮಾಡಿಸಲಿಎಚ್.ಡಿ ಕುಮಾರಸ್ವಾಮಿ ಸವಾಲು ಹಾಕಿದರು.

ಚನ್ನಪಟ್ಟಣದಲ್ಲಿ ಜನತೆಯ ಆಶೀರ್ವಾದ ಆಗಿದೆ,ನಿಖಿಲ್ ಹೆಚ್ಚು ಮತಗಳಿಂದ ಗೆಲ್ಲುತ್ತಾರೆ ಎಂದು ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.