ಬಂದಿರೊ ಫಲಿತಾಂಶ ಒಪ್ಪಿಕೊಳ್ಳಲೆಬೇಕು:ಹೆಚ್ ಡಿ ಕೆ

ಬೆಂಗಳೂರು: ಉಪ ಚುನಾವಣೆ ಫಲಿತಾಂಶ ಬಂದಾಗಿದೆ, ಈಗ ಏನು ಚರ್ಚೆ ಮಾಡಿದರೂ ಪ್ರಯೋಜನ ಇಲ್ಲ,ಏನು ಬಂದಿದೆಯೊ ಅದನ್ನ ಒಪ್ಪಿಕೊಳ್ಳಲೇಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಚನ್ನಪಟ್ಟಣ ಉಪಚುನಾವಣೆ ಫಲಿತಾಂಶ, ಮಗನ ಸೋಲು ಕುರಿತು ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದರು.

ಫಲಿತಾಂಶ ಒಪ್ಪಿಕೊಳ್ಳಲೇಬೇಕು ಏನೇ ಇದ್ದರೂ ಆಮೇಲೇ ಮಾತಾಡ್ತೇನೆ ಎಂದು ಹೇಳಿ ಬೇಸರದಲ್ಲೇ ಹೊರಟು ಹೋದರು.

ಚನ್ನಪಟ್ಟಣ ಉಪಚುನಾವಣೆ ಫಲಿತಾಂಶದ ಬಳಿಕ ಯಾವುದೇ ಕಾರ್ಯಕ್ರಮ ಹಾಕಿಕೊಳ್ಳದ ಹೆಚ್‌ಡಿಕೆ, ಜೆ.ಪಿ ನಗರದ ನಿವಾಸದಲ್ಲಿಯೇ ಇದ್ದರು.