ಮೈಸೂರು: ಮುಡಾ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಪೊಲೀಸರು ನೋಟೀಸ್ ಜಾರಿ ಮಾಡಿದ್ದಾರೆ.
ನ. 6ರಂದು ಬೆಳಗ್ಗೆ 10.30ಕ್ಕೆ ಲೋಕಾಯುಕ್ತ ಕಚೇರಿಗೆ ಹಾಜರಾಗುವಂತೆ ಸಿದ್ದರಾಮಯ್ಯ ಅವರಿಗೆ ಮೈಸೂರು ಲೋಕಾಯುಕ್ತ ಎಸ್ಪಿ ಟಿ.ಜೆ.ಉದೇಶ್ ನೋಟೀಸ್ ನೀಡಿದ್ದಾರೆ.
ಈ ಬಗ್ಗೆ ಶಿಗ್ಗಾವಿಯಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ನವೆಂಬರ್ 6 ರಂದೆ ವಿಚಾರಣೆಗೆ ಹಾಜರಾಗುತ್ತೇನೆ ಎಂದು ತಿಳಿಸಿದ್ದಾರೆ.
ಮೈಸೂರು ನಗರಾಭಿದ್ಧಿ ಪ್ರಾಧಿಕಾರದ 50:50 ಸೈಟ್ ಹಂಚಿಕೆ ಹಗರಣ ಸಂಬಂಧ ಮೈಸೂರು ಲೋಕಾಯುಕ್ತ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ಸಿಎಂ A1 ಆರೋಪಿಯಾಗಿದ್ದು, ಅವರ ಪತ್ನಿ ಪಾರ್ವತಿ ಅವರು A2 ಆರೋಪಿಯಾಗಿದ್ದಾರೆ.