ಚನ್ನಪಟ್ಟಣ: ಮೈಸೂರಿನಲ್ಲಿ ಸಚಿವರು ಇನ್ನಿತರರು ಹೊಡೆದಾಡಿಕೊಂಡಿರುವುದು ವರ್ಗಾವಣೆ ದಂಧೆ ವಿಚಾರಕ್ಕೆ ಎಂಬ ಮಾಹಿತಿ ಇದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಚನ್ನಪಟ್ಟಣದಲ್ಲಿ ಪ್ರಚಾರದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು; ವರ್ಗಾವಣೆ ವ್ಯವಹಾರಕ್ಕೆ ಅವರು ಕಿತ್ತಾಡಿಕೊಂಡಿದ್ದಾರೆ. ಇನ್ನೂ ಸ್ಪಷ್ಟವಾಗಿ ಹೇಳುವುದಾದರೆ ಹಂಚಿಕೆ ವಿಚಾರಕ್ಕೆ ಹೊಡೆದಾಡಿಕೊಂಡಿದ್ದಾರೆ ಎಂದು ಟೀಕಿಸಿದರು.
ಒಬ್ಬ ಮಂತ್ರಿಯನ್ನು ಬಹಿರಂಗವಾಗಿ ಹೊಡೆಯುತ್ತಾರೆ ಎಂದರೆ ಈ ರಾಜ್ಯ ಎಲ್ಲಿಗೆ ಬಂದಿದೆ,ಏನು ಕತೆ ಇದು ಎಂದು ಏನಾಗ್ತಿದೆ ಇದನ್ನೆಲ್ಲ ಜನತೆ ಗಮನಿಸಬೇಕು ಎಂದು ಕುಮಾರಸ್ವಾಮಿ ಹೇಳಿದರು.