ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಅನುಕೂಲ ಮಾಡಿಕೊಟ್ಟಿರುವ ರಾಜ್ಯ ಸರ್ಕಾರದ ಶಕ್ತಿ ಯೋಜನೆ ಮಾಡುವ ವಿಚಾರ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರ ಹರಿದಾಡುತ್ತಿದ್ದು,ಸ್ವತಃ ಸಿಎಂ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರ ಸರ್ಕಾರದ ಮುಂದೆ ಇಲ್ಲ. ನಿನ್ನೆಯ ಕಾರ್ಯಕ್ರದಲ್ಲಿ ನಾನು ಇರಲಿಲ್ಲ. ನಾನು ಮಂತ್ರಿಗಳ ಜೊತೆ ಮಾತಾಡುತ್ತೇನೆ. ಪರಿಷ್ಕರಣೆಯ ಯಾವುದೇ ಉದ್ದೇಶವಿಲ್ಲ. ಆ ರೀತಿ ಪ್ರಸ್ತಾಪವೂ ಸರ್ಕಾರದ ಮುಂದೆ ಇಲ್ಲ ಎಂದು ತಿಳಿಸಿದರು.
ಕೆಲ ಮಹಿಳೆಯರು ಯೋಜನೆ ಸವಲತ್ತುಗಳು ಬೇಡ ಎಂಬಂತೆ ಹೇಳಿಕೆ ನೀಡಿದ್ದಾರೆ.ನಾನು ಆವಾಗ ಅಲ್ಲಿ ಇರಲಿಲ್ಲ. ರಾಜ್ಯದಲ್ಲಿ ಶಕ್ತಿ ಯೋಜನೆ ಪರಿಷ್ಕರಣೆ ಪ್ರಸ್ತಾಪ ಇಲ್ಲ ಎಂದು ಪುನರುಚ್ಚರಿಸಿದರು.
ವಕ್ಫ್ ಆಸ್ತಿ ಗೊಂದಲವನ್ನು ಮುಂದಿಟ್ಟುಕೊಂಡು ನ.4ರಂದು ಬಿಜೆಪಿ ಪ್ರತಿಭಟನೆ ಮಾಡುತ್ತಿದೆಯಲ್ಲಾ ಎಂಬ ಸುದ್ದಿಗಾರರ ಪ್ರಶ್ನೆಗೆ, ಬಿಜೆಪಿಯವರು ರಾಜಕೀಯಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಅವರ ಕಾಲದಲ್ಲೂ 200ಕ್ಕೂ ಹೆಚ್ಚು ನೋಟೀಸ್ ಕೊಟ್ಟಿದ್ದರು. ಈ ರೀತಿಯ ಇಬ್ಬಂದಿ ರಾಜಕೀಯ ಮಾಡಬಾರದು ಎಂದು ಸಿಎಂ ಕುಟುಕಿದರು.