ಬೆಂಗಳೂರು: ನವೆಂಬರ್ 1ರ ಕನ್ನಡ ರಾಜ್ಯೋತ್ಸವ ದಂದು ಶಾಲಾ-ಕಾಲೇಜು, ಕಂಪನಿ, ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಹಾರಿಸಬೇಕೆಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನವೆಂಬರ್ 1 ನಮಗೆ ರೋಮಾಂಚನ ದಿನ. ಈ ವರ್ಷ 50ನೇ ವರ್ಷದ ರಾಜೋತ್ಸವ ಆಚರಿಸುತ್ತಿದ್ದೇವೆ. ಸ್ವಾತಂತ್ರ‍್ಯ ದಿನದ ರೀತಿ ಸಂಭ್ರಮ ಮಾಡಬೇಕು ಎಂದು ಹೇಳಿದರು.
ಖಾಸಗಿ ಮತ್ತು ಸರ್ಕಾರಿ ಶಾಲೆಗಳಲ್ಲಿ ಕಡ್ಡಾಯಾಗಿ ಕನ್ನಡ ಬಾವುಟ ಹಾರಿಸಬೇಕು. ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಆಚರಣೆ ಮಾಡಿ ನಿಮ್ಮ ಸಂಸ್ಥೆಯಲ್ಲಿ ಏನು ಮಾಡಿದ್ದೀರಿ ಎನ್ನುವುದಕ್ಕೆ ನಾವು ನೀಡುವ ನಂಬರ್‌ಗೆ ಪೋಸ್ಟ್ ಮಾಡಬೇಕು. ಕನ್ನಡ ಭೂಮಿಯಲ್ಲಿ ಕನ್ನಡ ಕಲಿಯಬೇಕಾಗಿರುವಯದು ಎಲ್ಲರಿಗೂ ಕಡ್ಡಾಯ ಎಂದು ಹೇಳಿದರು.
ಕನ್ನಡ ಬಾವುಟ ಕಡ್ಡಾಯ ಮಾಡಿದ್ದನ್ನು ಕನ್ನಡ ಸಂಘಟನೆಗಳು ದುರುಪಯೋಗ ಮಾಡಿಕೊಳ್ಳ ಬಾರದು. ಕಾರ್ಖಾನೆ, ಕಂಪನಿಗಳಿಗೆ ಒತ್ತಡ, ಕಿರುಕುಳ ನೀಡಬಾರದು,ಒಂದು ವೇಳೆ ಏನಾದರೂ ಒತ್ತಡ ಹೇರಿದರೆ ಅಂತಹ ಸಂಘಟನೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದರು.