17 ಕೋಟಿ ವೆಚ್ಚದಲ್ಲಿ ಬೆಳಗಾವಿ ಪೆÇಲೀಸ್ ಆಯುಕ್ತರ ಕಚೇರಿ ಕಟ್ಟಡ ನಿರ್ಮಾಣ -ಸಚಿವ ಬೊಮ್ಮಾಯಿ

ಬೆಳಗಾವಿ: ಬೆಳಗಾವಿ ಮಹಾನಗರದಲ್ಲಿ 17 ಕೋಟಿ ರೂ. ವೆಚ್ವದಲ್ಲಿ ಸುಸಜ್ಜಿತ ಪೆÇಲೀಸ್ ಆಯುಕ್ತರ ಕಚೇರಿಯನ್ನು ನಿರ್ಮಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ನಗರದ ಕಾಲೇಜು ರಸ್ತೆಯಲ್ಲಿ ಪೆÇಲೀಸ್ ಆಯುಕ್ತರ ಕಚೇರಿ ನಿರ್ಮಾಣಕ್ಕೆ ಮಂಗಳವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಪೆÇಲೀಸ್ ಆಯುಕ್ತರ ಕಚೇರಿ ನಿರ್ಮಿಸಿಬೇಕು ಎಂಬುದು ಬಹಳ ದಿನಗಳ ಬೇಡಿಕೆಯಾಗಿತ್ತು. ನಗರದಲ್ಲಿಯೇ ಎರಡು ಎಕರೆ ಜಾಗ ಲಭ್ಯವಿದೆ. ಇಲ್ಲಿ ಸುಸಜ್ಜಿತ ಕಟ್ಟಡ ನಿರ್ಮಿಸಲಾಗುತ್ತಿದೆ ಎಂದು ಹೇಳಿದರು.
ಬೆಳಗಾವಿ ಮಹಾನಗರಕ್ಕೆ ತಕ್ಕಂತೆ ಎಲ್ಲ ಸೌಕರ್ಯಗಳನ್ನು ಹೊಂದಿರುವ ಸುಸಜ್ಜಿತ ಕಟ್ಟಡವನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಲಾಗುವುದು ಎಂದು ಸಚಿವ ಬೊಮ್ಮಾಯಿ ತಿಳಿಸಿದರು.
ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಅನಿಲ್ ಬೆನಕೆ, ಮಾಜಿ ಶಾಸಕ ಸಂಜಯ ಪಾಟೀಲ ಮತ್ತಿತರರು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಕೆ.ಎಸ್.ಆರ್.ಪಿ. ಎಡಿಜಿಪಿ ಅಲೋಕ್ ಕುಮಾರ್, ಬೆಳಗಾವಿ ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್, ಪೆÇಲೀಸ್ ಆಯುಕ್ತರಾದ ಕೆ.ತ್ಯಾಗರಾಜನ್, ಪೆÇಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸೇರಿದಂತೆ ಪೆÇಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.