ಬೆಳಗಾವಿ: ಮಹಿಳೆಯರ ಬಗ್ಗೆ ಹಗುರವಾಗಿ ಹೇಳಿಕೆ ನೀಡಿರುವ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ತಕ್ಷಣ ಮಹಿಳೆಯರ ಕ್ಷಮೆ ಯಾಚಿಸಬೇಕೆಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಮೇಶ್ಕುಮಾರ್ ದೊಡ್ಡ ದೊಡ್ಡ ಉಪದೇಶದ ಮಾತುಗಳನ್ನು ಆಡುತ್ತಾರೆ. ಆದರೆ ಹೆಣ್ಣುಮಕ್ಕಳ ಬಗ್ಗೆ ಹಗುರವಾದ ಮಾತುಗಳನ್ನಾಡಿದ್ದಾರೆ ಇದು ಸರಯಲ್ಲ ಎಂದು ಹೇಳಿದರು.
ರಮೇಶ್ ಕುಮಾರ್ ಹಿರಿಯ ರಾಜಕಾರಣಿ, ಅವರು ಮಹಿಳೆಯರ ಬಗ್ಗೆ ಹಗುರವಾಗಿಮಾತನಾಡಿರುವುದು ಅಕ್ಷಮ್ಯ ಅಪರಾಧ. ಈ ಮೂಲಕ ರಾಜ್ಯದ ಮಹಿಳಾ ಸಮೂಹಕ್ಕೆ ಅವಮಾನ ಮಾಡಿದ್ದಾರೆ. ಕೂಡಲೇ ಅವರು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.