ಬೆಳಗಾವಿ: ಬೆಳಗಾವಿ ನಗರದಲ್ಲಿ ಪ್ರಾತಸ್ಮರಣೀಯ ವೀರನಾದ, ಸಂಗೊಳ್ಳಿ ರಾಯಣ್ಣ ರವರ ಪ್ರತಿಮೆಗೆ ಹಾನಿ ಮಾಡಿರುವ ಘಟನೆಯನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಖಂಡಿಸಿದ್ದಾರೆ.
ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣ ಹಾಗೂ ಶಿವಾಜಿ ಮಹಾರಾಜ್ ಅವರುಗಳು ನಮ್ಮೆಲ್ಲರ ಹೆಮ್ಮೆಯ ಪ್ರತೀಕವಾಗಿದ್ದಾರೆ ಎಂದು ಹೇಳಿದರು.
ಇವರಿಬ್ಬರು ಪ್ರತಿಯೊಬ್ಬ ನಾಗರಿಕರೂ ಹೆಮ್ಮೆ ಹಾಗೂ ಗರ್ವದಿಂದ ನೆನಸಿಕೊಳ್ಳುವಂತ ಭಾರತೀಯ ಪುತ್ರರು. ಇವರ ಹೆಸರಿನಲ್ಲಿ, ಕೆಲವು ಕಿಡಿಗೇಡಿಗಳು, ದುಷ್ಕೃತ್ಯ ನಡೆಸಿ, ಭಾಷಾ ಸಹೋದರತ್ವ ಹಾಗೂ ಬಾಂಧವ್ಯವನ್ನು ಕೆಡಿಸು ವಂತಹ ಕೃತ್ಯ ಎಸಗಿರುವ ಘಟನೆ ಅಕ್ಷಮ್ಯ ಅಪರಾಧವಾಗಿದೆ ಎಂದು ಹೇಳಿದ್ದಾರೆ.
ಈ ಕುರಿತು ಈಗಾಗಲೇ ಮಾಹಿತಿ ಪಡೆದುಕೊಂಡಿದ್ದು, ಬೆಂಗಳೂರು ಹಾಗೂ ಬೆಳಗಾವಿ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಎಫ್ ಐ ಅರ್ ದಾಖಲಾಗಿದ್ದು, ಕೆಲವರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.
ಶಾಂತಿ ಹಾಗೂ ಸಾಮರಸ್ಯ ಕಾಪಾಡಲು ರಾಜ್ಯದ ಜನತೆ ಸಹಕರಿಸಬೇಕೆಂದು ಆರಗ ಜ್ಞಾನೇಂದ್ರ ವಿನಂತಿಸಿದ್ದಾರೆ.