ಮೈಸೂರು: ಪತಿ ತವರು ಮನೆಗೆ ಕಳಿಸಲು ಒಪ್ಪಿಲ್ಲವೆಂಬ ಕಾರಣಕ್ಕೆ ಗೃಹಿಣಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ರಾಘವೇಂದ್ರನಗರ ಬಡಾವಣೆಯಲ್ಲಿ ನಡೆದಿದೆ.
ಅರ್ಪಿತಾ (22) ಆತ್ಮಹತ್ಯೆ ಮಾಡಿಕೊಂಡಿರುವ ಗೃಹಿಣಿ.
ಈಕೆ ಎರಡು ವರ್ಷಗಳ ಹಿಂದೆ ಗಾರೆ ಕೆಲಸ ಮಾಡುವ ಜಗದೀಶ್ ಎಂಬಾತನನ್ನು ವಿವಾಹವಾಗಿದ್ದು, ಒಂದು ಮಗುವಿದೆ.
ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ದಂಪತಿ ನಡುವೆ ಆಗಾಗ ಜಗಳವಾಗುತ್ತಿತ್ತು, ಮೂರು ದಿನಗಳ ಹಿಂದೆ ತವರು ಮನೆಗೆ ಹೋಗುವುದಾಗಿ ಅರ್ಪಿತಾ ಕೇಳಿದ್ದು, ಜಗದೀಶ್ ನಿರಾಕರಿಸಿದ್ದಾನೆ. ಇದರಿಂದ ಬೇಸರಗೊಂಡ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಈ ಘಟನೆ ನಡೆದು ಮೂರು ದಿನಗಳಾಗಿದ್ದು ತಡವಾಗಿ ಬೆಳಕಿಗೆ ಬಂದಿದೆ.
ನಜರಬಾದ್ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.