ಬೆಂಗಳೂರು: ವರ್ಷದ ಕೊನೆಯಲ್ಲಿ ಸ್ಯಾಂಡಲ್ ವುಡ್ ಗೆ ಮತ್ತೊಂದು ಶಾಕ್ ಉಂಟಾಗಿದೆ.
ಹಿರಿಯ ನಿರ್ದೇಶಕ ಕೆ.ವಿ. ರಾಜು ಬೆಂಗಳೂರಿನ ರಾಜಾಜಿನಗರ ನಿವಾಸದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಯಲ್ಲಿ ನಿಧನ ಹೊಂದಿದ್ದಾರೆ.
ಹುಲಿಯಾ, ಬೆಳ್ಳಿ ಮೋಡಗಳು,ಇಂದ್ರಜಿತ್, ಬೆಳ್ಳಿ ಕಾಲುಂಗುರ, ಯುದ್ದಕಾಂಡ ಸೇರಿದಂತೆ ಹಲವು ಸೂಪರ್ ಹಿಟ್ ಚಿತ್ರಗಳನ್ನು ಕೆ.ವಿ. ರಾಜು ನಿರ್ದೇಶಿಸಿದ್ದರು.
ಅಲ್ಲದೆ ಹಿಂದಿಯಲ್ಲಿ ಅಮಿತಾಬ್ ಬಚ್ಚನ್ ಚಿತ್ರಕ್ಕೂ ನಿರ್ದೇಶನ ಮಾಡಿದ್ದರು.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಕೆಲವು ದಿನಗಳಿಂದ ಮನೆಯಲ್ಲೆ ಚಿಕಿತ್ಸೆ ಪಡೆಯುತ್ತಿದ್ದರು.
ರಾಜಾಜಿನಗರದ ನಿವಾಸದಲ್ಲಿ ರಾಜು ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.
ನಟ, ನಟಿಯರು ನಿರ್ದೇಶಕರು, ಕನ್ನಡ ಚಲನಚಿತ್ರರಂಗದ ಗಣ್ಯರು, ಅಭಿಮಾನಿಗಳು, ರಾಜಕೀಯ ರಂಗದವರು ಕೆ.ವಿ.ರಾಜು ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.