ಮೈಸೂರು: ಅಪಘಾತದಲ್ಲಿ ವೈದ್ಯವೊಬ್ಬರು ಸಾವನ್ನಪ್ಪಿರುವ ಘಟನೆ ಮೈಸೂರಲ್ಲಿ ನಡೆದಿದೆ.
ಶಿವಕುಮಾರ್ (35) ಅಪಘಾತದಲ್ಲಿ ಸಾವನ್ನಪ್ಪಿದ ಮೈಸೂರಿನ ಇಎಸ್ಐ ಆಸ್ಪತ್ರೆ ವೈದ್ಯ.
ಡಾ. ಶಿವಕುಮಾರ್ ಪ್ರಯಾಣಿಸುತ್ತಿದ್ದ ಕಾರು ಮಾನಸಿ ನಗರದ ರಿಂಗ್ ರಸ್ತೆ ಬಳಿ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ.ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ತೀವ್ರ ಗಾಯಗೊಂಡಿದ್ದ ಡಾ. ಶಿವಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸಿದ್ದಾರ್ಥ ನಗರ ಸಂಚಾರ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.