ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ
ಚಾಮರಾಜನಗರ: 24ನೇ ವರ್ಷದ ಚಾಮರಾಜನಗರ ಜಿಲ್ಲಾ ಪೆÇಲೀಸ್ ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಮಂಗಳವಾರ ನಗರದ ಜಿಲ್ಲಾ ಪೆÇಲೀಸ್ ಕವಾಯತು ಮೈದಾನದಲ್ಲಿ ನಡೆಯಿತು.
ಕವಾಯತು ಮೈದಾನದಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿ ಚಾರುಲತಾ ಸೋಮಾಲ್ ಅವರು ಬಲೂನ್ ಹಾರಿ ಬಿಡುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
ಜನಸ್ನೇಹಿ ಪೆÇಲೀಸರಾಗಿ ಎಂಥಹ ಕಠಿಣ ಪರಿಸ್ಥಿತಿಯಲ್ಲೂ ಕುಗ್ಗದೆ ಕೆಲಸ ನಿರ್ವಹಣೆ ಮಾಡೊ ಪೆÇಲೀಸರು ಕ್ರೀಡಾಕೂಟದಲ್ಲಿ ಭಾಗವಹಿಸುವುದು ಸಂತೋಷ. ಜಿಲ್ಲಾಮಟ್ಟದಲ್ಲಿ ಭಾಗವಹಿಸಿ, ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ಜಿಲ್ಲೆಯ ಹೆಸರುಗಳಿಸುವಂತಾಗಲಿ ಎಂದು ಶುಭ ಹಾರೈಸಿದರು.
ಜಿ.ಪಂ.ಸಿಇಓ ಗಾಯತ್ರಿ, ಅಪರ ಜಿಲ್ಲಾಧಿಕಾರಿ ಕಾತ್ಯಾಯಿನಿ, ಎಸ್ಪಿ ದಿವ್ಯಸಾರಾ ಥಾಮಸ್, ಅಬ್ಕಾರಿ ಇಲಾಖೆಯ ಮುರುಳಿ, ಎಎಸ್ಪಿ ಸುಂದರರಾಜು ಇತರರು ಹಾಜರಿದ್ದರು.