ಚಾಮರಾಜನಗರ: 15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯದ ಉದ್ಘಾಟನಾ ಕಾರ್ಯಕ್ರಮ ಇಂದು ಚಾಮರಾಜನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.
ಕಾರ್ಯಕ್ರಮವನ್ನ ಜಿಲ್ಲಾಧಿಕಾರಿ ಚಾರುಲತಾ ಸೋಮಾಲ್ ಅವರು ಉದ್ಘಾಟಿಸಿದರು. ಅಪರ ಜಿಲ್ಲಾಧಿಕಾರಿ ಕಾತ್ಯಾಯಿನಿ, ಎಎಸ್ಪಿ ಸುಂದರರಾಜು, ಆರೊಗ್ಯ & ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ವಿಶ್ವೇಶ್ವರಯ್ಯ, ಜಿ.ಪಂ.ಸಿಇಓ.ಗಾಯತ್ರಿ, ಶಾಸಕ ಪುಟ್ಟರಂಗಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಣ್ಣೆಗೌಡ, ತಾಲ್ಲೋಕು ಆರೋಗ್ಯಾಧಿಕಾರಿ ಶ್ರೀನಿವಾಸ್ ಸೇರಿ ಇನ್ನಿತರರು ಹಾಜರಿದ್ದರು.