ಗುಂಡ್ಲುಪೇಟೆ ವಿಂಡ್ ಫ್ಲವರ್ ರೆಸಾರ್ಟ್ ಸೀಲ್ಡೌನ್

ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ

ಚಾಮರಾಜನಗರ: ಕೊರೊನಾ ಹಿನ್ನೆಲೆಯಲ್ಲಿ  ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯ ವಿಂಡ್ ಫ್ಲವರ್ ರೆಸಾರ್ಟ್ ಅನ್ನು ಸೀಲ್‌ಡೌನ್‌ ಮಾಡಲಾಗಿದೆ.

ಕೋವಿಡ್ ರ‍್ಯಾಂಡಮ್‌ ಟೆಸ್ಟ್ ನಡೆಸಿದ ವೇಳೆ ಐವರು ಸಿಬ್ಬಂದಿಗೆ ಕೊರೊನಾ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಂಡ್ ಫ್ಲವರ್ ರೆಸಾರ್ಟ್ ಸೀಲ್‌ಡೌನ್‌ ಮಾಡಲಾಗಿದೆ.

ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಭಾಗದಲ್ಲಿರುವ ಈ ರೆಸಾರ್ಟ್‌ನಲ್ಲಿ 50 ಮಂದಿ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದು, ರ‍್ಯಾಂಡಮ್‌ ಟೆಸ್ಟ್ ನಡೆಸಿದ ವೇಳೆ ಐವರಿಗೆ ಕೋವಿಡ್ ಪಾಸಿಟಿವ್ ಕಂಡುಬಂದಿದೆ‌.

ಮುನ್ನೆಚ್ಚರಿಕೆ ಕ್ರಮವಾಗಿ ರೆಸಾರ್ಟ್ ನಲ್ಲಿದ್ದ ಪ್ರವಾಸಿಗರನ್ನು ಟೆಸ್ಟ್‌ಗೆ ಒಳಪಡಿಸಿ ರೆಸಾರ್ಟ್ ಮುಚ್ಚಲಾಗಿದೆ.

ಹೊಸ ವರ್ಷಾಚರಣೆಗೆ ಬಂದಿದ್ದ ಪ್ರವಾಸಿಗರಿಂದ ಕೋವಿಡ್‌ ಹರಡಿರುವ ಶಂಕೆ ವ್ಯಕ್ತವಾಗಿದ್ದು, ಸದ್ಯ ಗಿರಿಜನರಲ್ಲಿ ಆತಂಕ ಶುರುವಾಗಿದೆ‌.

ಚಾಮರಾಜನಗರ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಗೂ ಕೊರೊನಾ ಕಾಣಿಸಿಕೊಂಡಿದ್ದು,ಆಕೆಯೊಂದಿಗಿನ ಸಂಪರ್ಕಿತರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ

ಪ್ರಧಾನಿ ಭೇಟಿ ವೇಳೆ ಕರ್ತವ್ಯ ಲೋಪ: ವರದಿ ಸಲ್ಲಿಸಲು ಪಂಜಾಬ್ ಸರ್ಕಾರಕ್ಕೆ ಸೂಚನೆ

ಚಂಡೀಗಢ:ಪಂಜಾಬ್ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಿದ ಸಂದರ್ಭದಲ್ಲಿ ಭದ್ರತಾ ಲೋಪಗಳಾಗಿವೆಯೇ ಎಂಬ ಬಗ್ಗೆ ತನಿಖೆ ನಡೆಸಲು ಅಲ್ಲಿನ ಸರ್ಕಾರ ಉನ್ನತಾಧಿಕಾರ ಸಮಿತಿಯನ್ನು ನೇಮಿಸಿದೆ.

ಪ್ರಧಾನಿಯವರ ಬೆಂಗಾವಲು ವಾಹನಗಳು ಫಿರೋಜ್‍ಪುರದಲ್ಲಿ ನಡೆಸಿದ ರಸ್ತೆ ತಡೆಯಿಂದಾಗಿ ಫ್ಲೈ ಓವರ್ ನಲ್ಲಿ ಸಿಲುಕಿಕೊಳ್ಳುವಂತಾಗಿ ಬಳಿಕ ಮೋದಿ ಅವರು ಚುನಾವಣೆ ನಡೆಯಬೇಕಿರುವ ಪಂಜಾಬ್‍ನಲ್ಲಿನ ಯಾವುದೇ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದೆ ವಾಪಸಾಗಬೇಕಾಯಿತು.

ಕೇಂದ್ರ ಗೃಹ ಸಚಿವಾಲಯವು ಈ ಕುರಿತು ರಾಜ್ಯ ಸರ್ಕಾರಕ್ಕೆ ತತ್‍ ಕ್ಷಣವೇ ಒಂದು ವರದಿ ನೀಡುವಂತೆ ಸೂಚಿಸಿದೆ. ಅಲ್ಲದೆ ಅಗತ್ಯವಿರುವಷ್ಟು ಭದ್ರತಾ ಸಿಬ್ಬಂದಿ ನಿಯೋಜಿಸಿರಲಿಲ್ಲ ಎಂದು ಕೂಡಾ ಹೇಳಿದೆ.

ಇಂಥ ಕರ್ತವ್ಯಲೋಪವು ಪ್ರಧಾನಿಯವರ ಭೇಟಿಯ ಸಂದರ್ಭದಲ್ಲಿ ನಡೆದರೆ ಅದು ಖಂಡಿತ ಸರಿಯಲ್ಲ ಮತ್ತು ಇದಕ್ಕೆ ಉತ್ತರ ಕೇಳಬೇಕಾಗುತ್ತದೆ ಎಂದು ಗೃಹ ಸಚಿವ ಅಮಿತ್ ಷಾ ಅವರು ಹೇಳಿದ್ದಾರೆ.

ಆದಾಗ್ಯೂ ಪಂಜಾಬ್ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ಅವರು ಯಾವುದೇ ರ್ಕವ್ಯಲೋಪ ಆಗಿಲ್ಲ ಮತ್ತು ಇದರ ಹಿಂದೆ ಯಾವುದೇ ರಾಜಕೀಯ ದುರುದ್ದೇಶ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ತಮ್ಮ ಸರ್ಕಾರ ಯಾವುದೇ ತನಿಖೆ-ವಿಚಾರಣೆಗೆ ಸಿದ್ಧವಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.