ಪಾದಯಾತ್ರೆ ತಡೆಗೆ ಎಡಿಜಿಪಿ ನೇತೃತ್ವದಲ್ಲಿ 3 ಸಾವಿರ ಪೊಲೀಸರ ನಿಯೋಜನೆ

ರಾಮನಗರ: ಕಾಂಗ್ರೆಸ್ ಪಾದಯಾತ್ರೆ ತಡೆಯಲು ಎಡಿಜಿಪಿ ನೇತೃತ್ವದಲ್ಲಿ ಸುಮಾರು 3 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಪಾದಯಾತ್ರೆಯನ್ನು ತಡೆಯುವ ಅನಿವಾರ್ಯತೆ ಸರ್ಕಾರಕ್ಕೆ ಎದುರಾಗಿದೆ.

ಈ ಹಿನ್ನೆಲೆಯಲ್ಲಿ ಐಜಿ ಲೋಕೇಶ್, ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಗಿರೀಶ್ ಅವರು ರಾಮನಗರ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಮುಖಂಡರ ಜೊತೆ ಚರ್ಚೆ ನಡೆಸಿದರು.

ರಾಮನಗರದ ಕಾಗೇಪುರಗೇಟ್ ಬಳಿ ಭಾರೀ ಸಂಖ್ಯೆಯಲ್ಲಿ ಪೊಲೀಸರು ಜಮಾಯಿಸಿ. ಪಾದಯಾತ್ರೆಯಲ್ಲಿ ಭಾಗವಹಿಸಲು ಆಗಮಿಸುತ್ತಿದ್ದ ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಮತ್ತಿತರ ಜಿಲ್ಲೆಗಳಿಂದ ಆಗಮಿಸುತ್ತಿದ್ದ ಕಾರ್ಯಕರ್ತರನ್ನು ಜಿಲ್ಲೆಯ ಗಡಿ ಭಾಗದಲ್ಲೇ ತಡೆದರು.

ರಾಮನಗರವನ್ನು ಸಂಪರ್ಕಿಸುವ ಕುಣಿಗಲ್, ಮಾಗಡಿ, ಮದ್ದೂರು, ಚೆನ್ನಪಟ್ಟಣ ಮಾರ್ಗಗಳಲ್ಲಿ ಬ್ಯಾರಿಕೇಡ್‍ಗಳನ್ನು ಹಾಕಿ ಪ್ರತಿಯೊಂದು ವಾಹನವನ್ನು ತಡೆದು ಪೊಲೀಸರು ಪರಿಶೀಲಿಸಿದರು.

ಕೆಲವು ಕಾರ್ಯಕರ್ತರನ್ನು ದಾರಿ ಮಧ್ಯೆಯೇ ತಡೆದು ನಿಲ್ಲಿಸಲಾಯಿತು.