ಬೆಂಗಳೂರು: ನನಗೆ ಕೊಟ್ಟಿರುವ ರಾಜಕೀಯ ಕಾರ್ಯದರ್ಶಿ ಹುದ್ದೆ ಕೇವಲ ಹೋದ ಪುಟ್ಟ, ಬಂದ ಪುಟ್ಟ ಎಂಬಂತಿದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅಸಮಾಧಾನ ಹೊರಹಾಕಿದ್ದಾರೆ.
ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು, ಚೇಂಬರ್ ಮತ್ತು ಚೇರು ಬಿಟ್ಟರೆ ಈ ಹುದ್ದೆಯಲ್ಲಿ ಬೇರೇನೂ ಇಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ವಿರುದ್ಧ ಕಿಡಿ: ಸರ್ಕಾರವನ್ನು ಅಸ್ತಿರಗೊಳಿಸಲು,ಬಿಜೆಪಿಗೆ ಕೆಟ್ಟ ಹೆಸರು ತರಲು ಕಾಂಗ್ರೆಸ್ ನವರು ಪಾದಯಾತ್ರೆ ನಾಟಕವಾಡಿದರು ಎಂದು ಇದೇ ವೇಳೆ ರೇಣುಕಾಚಾರ್ಯ ಕಿಡಿಕಾರಿದರು.
ಸಿದ್ದರಾಮಯ್ಯ ಅವರಿಗೆ ಪಾದಯಾತ್ರೆ ಇಷ್ಟ ವಿರಲಿಲ್ಲ. ಡಿ.ಕೆ.ಶಿವಕುಮಾರ್ ಎಲ್ಲಿ ನಾಯಕರಾಗಿ ಹೊರ ಹೊಮ್ಮುತ್ತಾರೋ,ಡಿಕೆಶಿಯನ್ನ ಸಿಎಂ ಅಭ್ಯರ್ಥಿ ಅಂತ ಘೋಷಣೆ ಮಾಡಿಬಿಡುತ್ತಾರೊ ಎಂಬ ಆತಂಕವೂ ಇತ್ತು ಎಂದು ಹೇಳಿದರು.