ದಾವಣಗೆರೆ:ಅತಿ ವೇಗವಾಗಿ ಚಲಿಸಿದ ಇಂಡಿಕಾ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಹೊಡೆದ ಪರಿಣಾಮ ಏಳು ಮಂದಿ ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನಲ್ಲಿ ನಡೆದಿದೆ.
ಜಗಳೂರಿನ ಕಣಕಟ್ಟೆ ಟೋಲ್ ಎನ್ ಎಚ್ 13 ರಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.
ಅಪಘಾತ ಬೆಳ್ಳಂಬೆಳಿಗ್ಗೆ ನಡೆದಿದ್ದು ಸ್ಥಳದಲ್ಲಿ ಆರು ಮಂದಿ ಮೃತಪಟ್ಟಿದ್ದು ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ್ದಾರೆ.
ಮೃತಪಟ್ಟ ವರನ್ನು ಮಲ್ಲನ ಗೌಡ(22), ಸಂತೋಷ್(21), ಸಂಜೀವ್(20), ಜೈಭೀಮ್(18), ರಾಘು(23), ಸಿದ್ದೇಶ್(20), ವೇದಮೂರ್ತಿ(18) ಎಂದು ಗುರುತಿಸಲಾಗಿದೆ.
ಮೃತರಲ್ಲಿ 4 ಜನ ಯಾದಗಿರಿಯ ಶಾಹಪುರದವರು,ಇಬ್ಬರು ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನವರು, ಮತ್ತೊಬ್ಬರು ವಿಜಯಪುರ ಜಿಲ್ಲೆಯ ತಾಳಿಕೋಟೆಯವರು.
ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ರಭಸವಾಗಿ ಬರುತ್ತಿದ್ದಾಗ ಕಾರು ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದಿದೆ ಎಂದು ಎಸ್ಪಿ ಸಿ.ಬಿ. ರಿಷ್ಯಂತ್ ತಿಳಿಸಿದ್ದಾರೆ.
ಮೃತದೇಹಗಳನ್ನು ಜಗಳೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಸಂಬಂಧಿಕರಿಗೆ ಮಾಹಿತಿ ನೀಡಲಾಗಿದೆ. ಇಂಡಿಕಾ ಕಾರು ಬೆಂಗಳೂರಿನಿಂದ ಹೊಸಪೇಟೆ ಕಡೆ ಹೋಗುತ್ತಿತ್ತು.
ಸ್ಥಳಕ್ಕೆ ದಾವಣಗೆರೆ ಎಸ್ಪಿ ಸಿ.ಬಿ. ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.