ಬಿಜೆಪಿಯಿಂದ ಒಬ್ಬ ಸಚಿವರಿಗೆ ಕಿಕ್ ಔಟ್

ಉತ್ತರಾಖಂಡ:ಉತ್ತರಾಖಂಡ ರಾಜ್ಯದ ಪ್ರಭಾವಿ ಸಚಿವ ಹರಕ್ ಸಿಂಗ್ ರಾವತ್ ಅವರನ್ನು ಸಂಪುಟದಿಂದ ಕೃಬಿಡಲಾಗಿದ್ದು,ಅಶಿಸ್ತಿನ ಕಾರಣದಿಂದ ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.

ಅರಣ್ಯ ಮತ್ತು ಪರಿಸರ, ಕಾರ್ಮಿಕ, ಉದ್ಯೋಗ ಮತ್ತು ಕೌಶಲ್ಯಾಭಿವೃದ್ಧಿ ಸಚಿವರಾಗಿದ್ದ ರಾವತ್ ಅವರು ಕಳೆದ ತಿಂಗಳು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ತಮ್ಮ ಕ್ಷೇತ್ರಕ್ಕೆ ವೈದ್ಯಕೀಯ ಕಾಲೇಜು ಮಂಜೂರು ಮಾಡಬೇಕೆಂದು ಪಟ್ಟು ಹಿಡಿದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕಿದ್ದರು.

ತಾವು ಶಾಸಕರಾಗಿರುವ ಕೋಟ್ವಾರ ಪ್ರದೇಶದಲ್ಲಿ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಯಾವುದೇ ಹಂತಕ್ಕೂ ಹೋಗುವುದಾಗಿ ಹೇಳಿಕೆ ನೀಡಿದ್ದರು.

ನಂತರ ಸರ್ಕಾರದ ವಿರುದ್ದ ಬಂಡಾಯ ಸಾರಿದ್ದರು.

ಅಲ್ಲದೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಸಂಬಂಧಿಯೊಬ್ಬರಿಗೆ ಬಿಜೆಪಿಯಿಂದ ಟಿಕೆಟ್ ನೀಡಬೇಕೆಂದು ರಾವತ್ ಬೇಡಿಕೆ ಇಟ್ಟಿದ್ದರು.

ಜತೆಗೆ ಕಾಂಗ್ರೆಸ್ ಪಕ್ಷ ಸೇರಲು ಪ್ರಯತ್ನಿಸಿದ್ದಾರೆ ಎಂಬ ಸುದ್ದಿಯೂ  ಹರಿದಾಡುತ್ತಿದೆ.

ಇದೀಗ ಆವರನ್ನು ಆರು ವರ್ಷಗಳ ಕಾಲ ಉಚ್ಚಾಟಿಸಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಮದನ್ ಕೌಶಿಕ್ ತಿಳಿಸಿದ್ದಾರೆ.

ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಶಿಫಾರಸಿನ ಮೇರೆಗೆ ಉತ್ತರಾಖಂಡ ರಾಜ್ಯಪಾಲ ಗುರ್ಮಿತ್ ಸಿಂಗ್  ರಾವತ್  ಅವರನ್ನು ರಾಜ್ಯ ಸಚಿವ ಸಂಪುಟದಿಂದ ವಜಾಗೊಳಿಸಿದ್ದಾರೆ.