ತೀರ್ಪು ಬರುವವರೆಗೆ ವಿದ್ಯಾರ್ಥಿಗಳು ಕೇಸರಿ ಶಾಲು,ಹಿಜಾಬ್ ಧರಿಸಬಾರದು – ಹೊರಟ್ಟಿ

ಹುಬ್ಬಳ್ಳಿ : ಹೈಕೋರ್ಟ್ ತೀರ್ಪು ಬರುವವರೆಗೆ ಸಮಾಜಕ್ಕೆ ಧಕ್ಕೆ ತರುವ ಕೇಸರಿ ಶಾಲು ಹಾಗೂ ಹಿಜಾಬ್ ಅನ್ನು ಯಾರೂ ಧರಿಸಬಾರದು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ  ಹೇಳಿದರು.

ಹುಬ್ಬಳ್ಳಿಯ ಮಿನಿವಿಧಾನಸೌಧ ಆವರಣದಲ್ಲಿ ಶುಕ್ರವಾರ  ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು, ಎಸ್​​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯವಾಗಿದೆ. ಪಿಯುಸಿ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಸಮವಸ್ತ್ರ ನೀಡುವುದು ಆಯಾ ಕಾಲೇಜುಗಳಿಗೆ ಸಂಬಂಧಿಸಿದೆ ಎಂದು ಹೇಳಿದರು.

ಕೋರ್ಟ್ ತೀರ್ಪು ಬರುವ ತನಕ ವಿದ್ಯಾರ್ಥಿಗಳು ಹಿಜಬ್ ಮತ್ತು ಕೇಸರಿ ಶಾಲು ಧರಿಸಿ ಶಾಲೆ, ಕಾಲೇಜಿಗೆ ಬರಲು ಅವಕಾಶ ನೀಡಬಾರದು ಎಂದು ತಿಳಿಸಿದರು.

ಪಿಯುಸಿ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿಚಾರ ಆಯಾ ಕಾಲೇಜುಗಳಿಗೆ ಸಂಬಂಧಿಸಿದೆ ಎಂದರು.