ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ರನ್ನು ಬಂಧಿಸಿದ ಇಡಿ ಅಧಿಕಾರಿಗಳು

ಮುಂಬೈ: ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರದ ಸಚಿವ ನವಾಬ್ ಮಲಿಕ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.

ಸುದೀರ್ಘ ವಿಚಾರಣೆ ನಂತರ ಬುಧವಾರ ಮಧ್ಯಾಹ್ನ ಅವರನ್ನು ಬಂಧಿಸಲಾಗಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.

ಎನ್ ಸಿಪಿಯಲ್ಲಿ ಹಿರಿಯ ಮುಖಂಡರಾಗಿ ಗುರುತಿಸಿಕೊಂಡಿದ್ದ ಮಲಿಕ್ ಅವರು ಕಳೆದ 4 ವರ್ಷಗಳ ಹಿಂದೆ ವ್ಯವಹಾರವೊಂದರಲ್ಲಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಆರೋಪ ಕೇಳಿ ಬಂದಿತ್ತು.

ಬುಧವಾರ ಬೆಳಿಗ್ಗೆ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಅವರನ್ನು ಕಚೇರಿಗೆ ಕರೆದುಕೊಂಡು ಹೋಗಿದ್ದರು.

ಕೇಂದ್ರ ತನಿಖಾ ಸಂಸ್ಥೆಯ ಅಧಿಕಾರಿಗಳು ಬೆಳಗ್ಗೆ 6 ಗಂಟೆಗೆ ಎನ್‍ಸಿಪಿ ನಾಯಕನ ಮನೆಗೆ ತಲುಪಿ. ಅಲ್ಲಿ ಅವರನ್ನು ಒಂದು ಗಂಟೆಗಳ ಕಾಲ ವಿಚಾರಣೆ ನಡೆಸಿ ಆನಂತರ ಬೆಳಗ್ಗೆ 7.30ಕ್ಕೆ ಇಡಿ ಕಚೇರಿಗೆ ಕರೆದು ಕೊಂಡು ಹೋಗಿ ಮಧ್ಯಾಹ್ನ ಬಂಧಿಸಿದ್ದಾರೆ.