ರಾಮನಗರ: ರಾಮನಗರ ಜಿಲ್ಲೆ, ಬಿಡದಿ ಹೋಬಳಿಯಲ್ಲಿ ರಾತ್ರೋರಾತ್ರಿ ದುಷ್ಕರ್ಮಿಗಳು ಕಾಂಗ್ರೆಸ್ ಮುಖಂಡರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿದ್ದು ಬಿಡದಿ ಜನ ಬೆಚ್ಚಿಬಿದ್ದಿದ್ದಾರೆ.
ಬಿಡದಿ ಹೋಬಳಿ ಬಾನಂದೂರು ಗ್ರಾಮದ ನಿವಾಸಿ ಗಂಟಪ್ಪ ಕೊಲೆಯಾದ ಕಾಂಗ್ರೆಸ್ ಮುಖಂಡ.
ಶುಕ್ರವಾರ ರಾತ್ರಿ ಸುಮಾರು 11 ಗಂಟೆಯಲ್ಲಿ ಬೈರವನದೊಡ್ಡಿ ಸಮೀಪ ಅವರದೇ ತೋಟದ ಬೈಕ್ ಸರ್ವೀಸ್ ಸ್ಟೇಷನ್ ಮನೆಯಲ್ಲಿ ದುಷ್ಕರ್ಮಿಗಳು ಗಂಟಪ್ಪ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಜಮೀನು ವಿವಾದಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.