ಜನ ಮೋದಿ ಮೇಲೆ ಇಟ್ಟಿರುವ ವಿಶ್ವಾಸ ಕಂಡು ಬೆರಗಾಗಿದ್ದೇನೆ -ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಅದ್ದೂರಿ ಗೆಲುವು ಸಾಧಿಸಿದ್ದು

ಜಗತ್ತಿನ ಅತೀದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್  ಜೋಶಿ ಹೇಳಿದರು.

ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿ ನಿಧಿಗಳೊಂದಿಗೆ ‌ಮಾತನಾಡಿದ ಅವರು,

ದೇಶದ ಜನರು ಪ್ರಧಾನಿ ಮೋದಿ ಮೇಲೆ ಇಟ್ಟಿರುವ ವಿಶ್ವಾಸ ಕಂಡು ನಾನು ಬೆರಗಾಗಿದ್ದೇನೆ ಎಂದು ಹೇಳಿದರು.

ನಾಲ್ಕು ದಿನ ಪ್ರಧಾನಮಂತ್ರಿಗಳು ಉತ್ತರಾಖಂಡ್ ಗೆ ಭೇಟಿ ನೀಡಿದಗದರಿಂದ ಗೆಲುವಿಗೆ ಕಾರಣವಾಯಿತು.

ಉತ್ತರಾಖಂಡ  ಗೆಲುವಿಗೆ ನಾನೊಬ್ಬನೇ ಕಾರಣ ಅಂತ ಹೇಳುವುದಿಲ್ಲ ಎಂದು ತಿಳಿಸಿದರು.

ಅಲ್ಲಿ 80 ಸಾವಿರ ಸಭೆಗಳನ್ನು ಮಾಡಿದ್ದು ಮೈಲುಗಲ್ಲು,ಉತ್ತರಾಖಂಡ ರಾಜ್ಯ ಅಭಿವೃದ್ಧಿ ಕಂಡಿದ್ದು ಈ ಐದು ವರ್ಷದಲ್ಲಿ ಎಂದು ಹೇಳಿದರು.

ನಾಲ್ಕು ರಾಜ್ಯದ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ಮುಗಿಸಬೇಕಿದೆ. ಎಪ್ರಿಲ್ 8 ರವರೆಗೆ ಅಧಿವೇಶನ ಇದೆ. ಅಧಿವೇಶನ ಮುಗಿದ ಬಳಿಕ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ಚರ್ಚೆಯಾಗಲಿದೆ.

ಅಲ್ಲಿಯವರೆಗೆ ಸಂಪುಟ ವಿಸ್ತರಣೆ, ಪುನಾರಚನೆ ಬಗ್ಗೆ ಚರ್ಚೆ ಇಲ್ಲ ಎಂದು ಜೋಷಿ ತಿಳಿಸಿದರು.

ಪ್ರಧಾನಿ ಉಕ್ರೇನ್ ಹಾಗು ರಷ್ಯಾ ಜೊತೆ ಮತುಕತೆ ನಡೆಸಿ 22 ಸಾವಿರ ಜನರನ್ನು ಸ್ಥಳಾಂತರ ಮಾಡಿದರು.

ಇದು ಮೋದಿಯವರ ವ್ಯಕ್ತಿತ್ವದ ಗಟ್ಟಿತನ ತೋರಿಸುತ್ತದೆ‌ ಎಂದು ಹೇಳಿದರು.

ಡಿಕೆಶಿ ಗೋವಾಕ್ಕೆ‌ ಚುನಾವಣೆಗೆ ಹೋಗಿದ್ದಕ್ಕೆ  ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವರು,

ತೋಳ್ ಬಲ ತೋರಿಸಲು, ಗೂಂಡಾಗಿರಿ ಮಾಡಲು ಡಿಕೆಶಿ ಗೋವಾ ಹೋಗಿದ್ರಾ..?

ಕೂಸು ಹುಟ್ಟುವ ಮುನ್ನೆ ಕುಲಾವಿ ಹೊಲಿಸಿದ್ರು ಎಂಬಂತೆ ಕಾಂಗ್ರೆಸ್ ನಡೆ ಇದೆ ಎಂದು ಮೂದಲಿಸಿದರು.

ಸ್ವಾತಂತ್ರ್ಯ ನಂತರ ಕಾಂಗ್ರೆಸ್ ವಿಸರ್ಜಿಸಿ‌ ಎಂದು ಮಹಾತ್ಮ ಗಾಂಧೀಜಿ ಹೇಳಿದ್ದರು, ಅದನ್ನು ರಾಹುಲ್ ಗಾಂಧಿ ಈಗ ಕಾರ್ಯರೂಪಕ್ಕೆ ತರುತ್ತಿದ್ದಾರೆ‌. ಖುಷಿಯ ವಿಚಾರ ಎಂದರು.