ಸಿ ಎ ವಿದ್ಯಾರ್ಥಿನಿ ನೇಣಿಗೆ ಶರಣು

ಮೈಸೂರು: ಸಿಎ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ದಾಸನಕೊಪ್ಪಲು ಗ್ರಾಮದಲ್ಲಿ ನಡೆದಿದೆ.

ದಾಸನಕೊಪ್ಪಲು ಗ್ರಾಮದ ಚಂದನ(23) ಆತ್ಮಹತ್ಯೆ ಮಾಡಿಕೊಂಡ ಯುವತಿ.

ಈಕೆಯ ತಂದೆ ಕೆ.ಎಸ್.ಆರ್.ಟಿ.ಸಿ ನೌಕರರು. ತಾಯಿ ಕೆನರಾ ಬ್ಯಾಂಕ್ ನಲ್ಲಿ ಉದ್ಯೋಗಿಯಾಗಿದ್ದಾರೆ.

ಎಂಕಾಂ ಮುಗಿಸಿದ್ದ ಚಂದನ ಸಿಎಗೆ ಸಿದ್ಧತೆ ಮಾಡಿಕೊಂಡಿದ್ದರು.

ಮಾನಸಿಕ ಖಿನ್ನತೆಗೆ ಒಳಗಾದ ಚಂದನ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜಯಪುರ  ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.