ಚಾಮರಾಜನಗರ: ಹನೂರು ತಾಲ್ಲೂಕಿನ ಮಂಗಲ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿ ಆನಂದ ಕಾಂಬ್ಳೆ ಅವರನ್ನು ಅಮಾನತು ಮಾಡಲಾಗಿದೆ.
ಕಾಂಬ್ಳೆ ಪತ್ನಿ ಮರಣದ ಹಿನ್ನೆಲೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು.ಈ ಸಂಬಂಧ ಅವರು ಪೊಲೀಸ್ ಬಂಧನದಲ್ಲಿ 48 ಗಂಟೆಗಳಿಗೂ ಹೆಚ್ಚಿನ ಅವಧಿಯಲ್ಲಿದ್ದರು.
ಹಾಗಾಗಿ ಅವರನ್ನು ಮಾರ್ಚ್15 ರಿಂದ ಪೂರ್ವನ್ವಯವಾಗುವಂತೆ ಸೇವೆಯಿಂದ ಅಮಾನತು ಮಾಡಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯತ್ರಿ ಅವರು ಆದೇಶ ಹೊರಡಿಸಿದ್ದಾರೆ.