ಬಸ್ ಉರುಳಿ ಎಂಟು ಮಂದಿ ಸಾವು

ತುಮಕೂರು: ಖಾಸಗಿ ಬಸ್ ಉರುಳಿಬಿದ್ದ ಪರಿಣಾಮ ಎಂಟು ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಭೀಕರ ಘಟನೆ ಪಾವಗಡ ತಾಲ್ಲೂಕಿನ ಪಳವಳ್ಳಿ ಬಳಿ ನಡೆದಿದೆ.

ವೈ.ಎನ್.ಹೊಸಕೋಟೆಯಿಂದ ಪಾವಗಡಕ್ಕೆ ಬರುತ್ತಿದ್ದ ಖಾಸಗಿ ಎಸ್ಎಲ್ ವಿ ಬಸ್ ಪಳವಳ್ಳಿ ಕೆರೆ ಬಳಿಯ ತಿರುವಿನಲ್ಲಿ ಉರುಳಿಬಿದ್ದಿದೆ.

ಬಸ್ ಅಪಘಾತಕ್ಕೆ ಚಾಲಕನ ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆ ಕಾರಣ ಎಂದು ಕೆಲ ಪ್ರಯಾಣಿಕರು ತಿಳಿಸಿದ್ದಾರೆ.

ಇಪ್ಪತ್ತೈದಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ತೆರಳಲು ಇದೇ ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು.

ಸ್ಥಳಕ್ಕೆ ಪಾವಗಡ ಪೊಲೀಸರು ಧಾವಿಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.