ವೈದ್ಯಕೀಯ ಶಿಕ್ಷಣದ ವೆಚ್ಚ ಪರಿಶೀಲಿಸಿ ಕ್ರಮ -ಸಿಎಂ ಅಭಯ

ದಾವಣಗೆರೆ: ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ವೆಚ್ಚ ಹೆಚ್ಚಾಗುತ್ತಿದೆ. ಇದರ ಬಗ್ಗೆ ಈಗಾಗಲೇ ಚರ್ಚೆ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ದಾವಣಗೆರೆಯ ಜಿಎಂಐಟಿ ಹೆಲಿಪ್ಯಾಡ್ ಬಳಿ ಮಾದ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು,

ನಮ್ಮ ರಾಜ್ಯದಲ್ಲಿ ಎ, ಬಿ, ಸಿ ಕೆಟಗರಿ ಮಾಡಲು ತೀರ್ಮಾನ ಮಾಡಿದ್ದೇವೆ ಎಂದು ಹೇಳಿದರು.

ಉಕ್ರೇನ್‍ನಿಂದ ಮರಳಿದ ವಿದ್ಯಾರ್ಥಿಗಳ ಹಿತ ಕಾಯುವ ಬಗ್ಗೆ ರಾಷ್ಟ್ರೀಯ ವೈದ್ಯಕೀಯ ಪರೀಕ್ಷ ಅಧಿಕಾರಿಗಳು ಚಿಂತನೆ ನಡೆಸಿದ್ದು, ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಬಾರದು ಎಂದು ಅಭಯ ನೀಡಿದರು.

ರಷ್ಯಾ ಹಾಗೂ ಉಕ್ರೇನ್ ನಡುವಿನ ಯುದ್ಧದಿಂದಾಗಿ ರಾಜ್ಯದ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮೊಟಕುಗೊಳಿಸಿ ರಾಜ್ಯಕ್ಕೆ ಆಗಮಿಸಿದ್ದಾರೆ. ಮುಂದಿನ ಅವರ ವಿದ್ಯಾಭ್ಯಾಸದ ಬಗ್ಗೆ ಕೇಂದ್ರ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು  ಬೊಮ್ಮಾಯಿ ತಿಳಿಸಿದರು.

ಉಕ್ರೇನ್‍ನಲ್ಲಿ ಮೃತಪಟ್ಟ ನವೀನ್ ಮೃತದೇಹವನ್ನು ಸ್ವಗ್ರಾಮಕ್ಕೆ ತರಲಾಗಿದೆ. ಮೃತದೇಹ ತರಲು ವಿದೇಶಾಂಗ ಸಚಿವರು ಬಹಳಷ್ಟು ಶ್ರಮಿಸಿದ್ದಾರೆ ಎಂದರು.

ಆಪರೇಷನ್ ಗಂಗಾ ಯೋಜನೆಯಲ್ಲಿ 572 ಕನ್ನಡಿಗರನ್ನು ವಾಪಸ್ ಕರೆತರಲಾಗಿದೆ. ಯುದ್ಧಭೂಮಿಯಲ್ಲಿ ನಮ್ಮ ರಾಷ್ಟ್ರಧ್ವಜವನ್ನು ಹಿಡಿದರೆ ಸಾಕು, ಗೌರವ ಕೊಟ್ಟು ಬಿಟ್ಟು ಬಿಡುತ್ತಿದ್ದರು. ಇದರಿಂದಲೇ ಗೊತ್ತಾಗುತ್ತದೆ ನಮ್ಮ ದೇಶದ ಶಕ್ತಿ ಎಂತಹದ್ದು ಎಂದು ಸಿಎಂ ಹೆಮ್ಮೆ ಪಟ್ಟರು.