ಬಸ್ ಡಿಕ್ಕಿ : ತಂದೆ, ತಾಯಿ ಇಬ್ಬರು ಮಕ್ಕಳು ಸಾವು

ಚಿತ್ರದುರ್ಗ: ದ್ವಿಚಕ್ರವಾಹನಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ಕು ಮಂದಿ ಸ್ಥಳದಲ್ಲೇ  ಸಾವನ್ನಪ್ಪಿದ ಘಟನೆ ಹೊಳಲ್ಕೆರೆ ತಾಲ್ಲೂಕಿನ ದುಮ್ಮಿ ಗ್ರಾಮದ ಬಳಿ ನಡೆದಿದೆ.

 ಬಿ ದುರ್ಗ ಗ್ರಾಮದ ನಾಗರಾಜ್(48), ಇವರ ಪತ್ನಿ ಶೈಲಜಾ (42), ಪುತ್ರರಾದ ವೀರೇಶ್ (15), ಸಂತೋಷ್ (13) ಮೃತಪಟ್ಟ ದುರ್ದೈವಿಗಳು.

ಚನ್ನಗಿರಿ ತಾಲ್ಲೂಕಿನ ಹೆಬ್ಬಳಗೆರೆ ಗ್ರಾಮಕ್ಕೆ ಜಾತ್ರೆ ಪ್ರಯುಕ್ತ ಸಂಬಂಧಿಕರ ಮನೆಗೆ ತೆರಳಿ ರಾತ್ರಿ ಊಟ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ವಾಪಸು  ಬರುತ್ತಿದ್ದಾಗ ಹೊಳಲ್ಕೆರೆ ಕಡೆಯಿಂದ ವೇಗವಾಗಿ ಬಂದ ಖಾಸಗಿ ಬಸ್ ಹಿಂಬದಿಯಿಂದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ.

ಹೊಳಲ್ಕೆರೆ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ  ಪರಿಶೀಲಿಸಿದರು. ಅಪಘಾತ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.