ಕುಣಿಗಲ್: ವಿದ್ಯಾರ್ಥಿ ಜೀವನದ ಅತ್ಯಂತ ಪ್ರಮುಖ ಘಟ್ಟವಾದ ಎಸ್ ಎಸ್ ಎಲ್ ಸಿ ಬರೆಯಲು ಹೊರಟಿದ್ದ ಬಾಲಕ ಅಪಘಾತದಲ್ಲಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಕುಣಿಗಲ್ ತಾಲೂಕಿನಲ್ಲಿ ನಡೆದಿದೆ.
ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಅಮೃತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವರ ಸಂಭವಿಸಿದೆ.
ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಜಿನ್ನಾಗರ ಗ್ರಾಮದ ನವೀನ್ (16) ಮೃತಪಟ್ಟ ವಿದ್ಯಾರ್ಥಿ.
ಪರೀಕ್ಷೆಗೆ ತಡವಾಗಬಾರದೆಂದು ಒಂದೇ ಬೈಕ್ ನಲ್ಲಿ ಮೂವರು ವಿದ್ಯಾರ್ಥಿಗಳು ಹೋಗುತ್ತಿದ್ದರು.
ನವೀನ್ ಸ್ಥಳದಲ್ಲೇ ಮೃತಪಟ್ಟರೆ ಶರತ್, ದರ್ಶನ್‍ಗೆ ಗಾಯಗಳಾಗಿದೆ.
ಗಣಿತ ಪರೀಕ್ಷೆ ಬರೆಯಲು ಡಾ. ರಾಜೇಂದ್ರ ಪ್ರಸಾದ್ ಹೈಸ್ಕೂಲ್ ವಿದ್ಯಾರ್ಥಿಗಳಾದ ಈ ಮೂವರು ಸೆಣಬಘಟ್ಟದಿಂದ ಅಮೃತೂರಿಗೆ ಬೈಕ್‍ನಲ್ಲಿ ತೆರಳುತ್ತಿದ್ದರು.
ಅಮೃತೂರು ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿದರು.
ಅಪಘಾತದ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.