ಹುಣಸೂರು: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕಾಮಗಾರಿಯಲ್ಲಿ ಭಾಗವಹಿಸುವ ಕೂಲಿಕಾರ್ಮಿಕರಿಗೆÉ ಏರ್ಪಡಿಸಲಾಗಿದ್ದ ಆರೋಗ್ಯ ತಪಾಸಣಾ ಶಿಬಿರದಲ್ಲಿ ಸ್ವತಃ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹೆಚ್.ಡಿ.ಗಿರೀಶ್ ಅವರೇ ಚಿಕಿತ್ಸೆ ಪಡೆದುಕೊಳ್ಳುವ ಮೂಲಕ ಚಾಲನೆ ನೀಡಿದರು.
ಹುಣಸೂರು ತಾಲ್ಲೂಕಿನ ಹೆಗ್ಗಂದೂರು ಗ್ರಾಮ ಪಂಚಾಯಿತಿಯ ವಡ್ಡಂಬಾಳು ಗ್ರಾಮದಲ್ಲಿ ನಡೆಯುತ್ತಿರುವ ಚರಂಡಿ ಕಾಮಗಾರಿ ಸ್ಥಳದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದ್ದು, ಸುಮಾರು 20ಕ್ಕೂ ಹೆಚ್ಚು ನರೇಗಾ ಕೂಲಿಕಾರರು ಹಾಗೂ ಗ್ರಾಮಸ್ಥರಿಗೆ ಆರೋಗ್ಯ ತಪಾಸಣೆ ಮಾಡಲಾಯಿತು.
ಈ ವೇಳೆ ಅಧಿಕ ಸಕ್ಕರೆ ಖಾಯಿಲೆ ಹಾಗೂ ಬಿಪಿ ಉಳ್ಳವರಿಗೆ ಸೂಕ್ತ ಚಿಕಿತ್ಸೆ ತೆಗೆದುಕೊಳ್ಳುವಂತೆ ಮಾರ್ಗದರ್ಶನ ಮಾಡಲಾಯಿತು.
ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷ ಹೆಚ್.ಡಿ.ಲೋಕೇಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹದೇವ್, ಗ್ರಾಮ ಪಂಚಾಯಿತಿ ಆರೋಗ್ಯ ಅಭಿಯಾನ ಸಂಯೋಜಕ ವಸಂತ್ ಕುಮಾರ್ ಸೇರಿದಂತೆ ತಾಲ್ಲೂಕು ಪಂಚಾಯತ್ ಸಿಬ್ಬಂದಿ ಉಪಸ್ಥಿತರಿದ್ದರು.
ಹಾಗೇ ಕರ್ಣಕುಪ್ಪೆ ಗ್ರಾಮ ಪಂಚಾಯಿತಿಯ ಕಣಗಾಲು ಗ್ರಾಮದಲ್ಲೂ ಸಹ ಆರೋಗ್ಯ ತಪಾಸಣೆ ನಡೆಸಲಾಯಿತು.