ಚಾಮರಾಜನಗರ: ಚಾಮರಾಜ ನಗರ ಜಿಲ್ಲಾಡಳಿತ ಕಚೇರಿಯಿಂದ ಶಿಷ್ಠಾಚಾರ ಉಲ್ಲಂಘನೆಯಾಗಿದ್ದು ಸಾರ್ವಜನಿಕ ವಲಯದಲ್ಲಿ ಅಸಮಾಧಾನ ವ್ಯಕ್ತವಾಗಿದೆ.
ಎಪ್ರೀಲ್ ೧೪ರ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಶಿಷ್ಠಾಚಾರ ಉಲ್ಲಂಘನೆಯಾಗಿದೆ.
ರಾಜ್ಯ ಸರ್ಕಾರದ ಅದೇಶದಂತೆ ಯಾವುದೇ ರಾಷ್ಟ್ರೀಯ ಹಬ್ಬಗಳ ಆಹ್ವಾನ ಪತ್ರಿಕೆಗಳಲ್ಲಿ ಸಂಸದರು, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರು ಮತ್ತು ವಿಧಾನ ಪರಷತ್ ಸದಸ್ಯರು ಹಾಗೂ ಕೇಂದ್ರ ಪರಿಹಾರ ಸಮಿತಿ ಸದಸ್ಯರು, ನಗರಸಭೆ ಅಧ್ಯಕ್ಷರ ಹೆಸರನ್ನು ಮಾತ್ರ ಆಹ್ವಾನ ಪತ್ರಿಕೆಯಲ್ಲಿ ಮುದ್ರಿಸಲು ಅವಕಾಶವಿದೆ.
ಅದರೆ ಇತ್ತಿಚಿನ ದಿನಗಳಲ್ಲಿ ಜಿಲ್ಲಾಡಳಿತ ದಿಂದ ನಡೆಯುತ್ತಿರುವ ಕಾರ್ಯಕ್ರಮಗಳಲ್ಲಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ಹೆಸರನ್ನು ಸಹ ಮುದ್ರಿಸಲಾಗುತ್ತಿದೆ. ಇದು ಜಿಲ್ಲಾಡಳಿತ ಮಾಡುತ್ತಿರುವ ಶಿಷ್ಠಾಚಾರ ಉಲ್ಲಂಘನೆಯಾಗಿದೆ.
ಯಾವುದೇ ಸಂಘ ಸಂಸ್ಥೆಯ ಅಧ್ಯಕ್ಷರನ್ನು ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ನೀಡಿ ಕರೆಯುವುದು ವಾಡಿಕೆ. ಅದರೆ ರಾಷ್ಟ್ರೀಯ ಹಬ್ಬವಾದ ಡಾ. ಬಿ.ಆರ್.ಅಂಬೇಡ್ಕರ್ ದಿನಾಚರಣೆಯ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಮುಖ್ಯ ಅತಿಥಿಗಳ ಜಾಗದಲ್ಲಿ ಚಾಮರಾಜನಗರ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ್ ಹೆಸರು ಮುದ್ರಿಸಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.
ನಮ್ಮ ರಾಜ್ಯದ ಬೇರೆ ಜಿಲ್ಲೆಗಳಲ್ಲಿ ಶಿಷ್ಠಾಚಾರದ ಪ್ರಕಾರವೇ ಆಹ್ವಾನ ಪತ್ರಿಕೆ ಮುದ್ರಣವಾಗಿದೆ.
ಅದರೆ ಚಾಮರಾಜನಗರ ಜಿಲ್ಲೆಯಲ್ಲಿ ಮಾತ್ರ ಉಲ್ಲಂಘನೆಯಾಗಿದ್ದು ಶಿಷ್ಟಾಚಾರ ಉಲ್ಲಂಘನೆ ಬಗ್ಗೆ ಹೊಂಗನೂರು ನಾಗೇಶ್ ಚಾಮರಾಜನಗರ ಜಿಲ್ಲಾಧಿಕಾರಿಗಳ ಗಮನ ಸೆಳೆದಿದ್ದಾರೆ.