ದಾವಣಗೆರೆ: ಹಳೆ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ತಪ್ಪಿತಸ್ಥರು ಯಾವ ಪಕ್ಷದವರಾಗಿದ್ದರೂ ಅವರಿಗೆ ಕಠಿಣ ಶಿಕ್ಷೆಯಾಗಲಿ ಎಂದು ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ದಾವಣಗೆರೆಯಲ್ಲಿ ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು, ಗಲಭೆಗೆ ಮೂಲ ಕಾರಣ ಬಿಜೆಪಿಯವರೇ ಎಂದು ವಾಗ್ದಾಳಿ ನಡೆಸಿದರು.
ವಿವಾದಾತ್ಮಕ ಪೋಸ್ಟ್ ಹಾಕಿದವನ ಹಿಂದೆ ಬಿಜೆಪಿಯವರು ಇದ್ದಾರೆ, ಸರಿಯಾದ ತನಿಖೆ ನಡೆಯಲಿ ತಪ್ಪು ಮಾಡಿದವರು ಯಾರೇ ಆಗಲಿ,ಯಾವ ಪಕ್ಷದವರೇ ಅಗಲಿ ಕಠಿಣ ಶಿಕ್ಷೆ ನೀಡಬೇಕೆಂದು ಸಿದ್ದು ಸರ್ಕಾರವನ್ನು ಆಗ್ರಹಿಸಿದರು.