ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ
ಚಾಮರಾಜನಗರ:ಪಿಕಪ್ ಹಾಗೂ ಟ್ಯಾಂಕರ್ ನಡುವೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಧಾರುಣವಾಗಿ ಸಾವನ್ನಪ್ಪಿದ ಘಟನೆ ಗುಂಡ್ಲುಪೇಟೆ ತಾಲ್ಲೋಕಿನ ಕೊತನೂರು ಸಮೀಪ ನಡೆದಿದೆ.
ಕೇರಳದ ಕಲ್ಪೆಟ್ಟ ಮೂಲದ ಅಲ್ತಾಫ್ ಹಾಗೂ ಅಜ್ಮಲ್ ಎಂಬವರು ಮೃತ ದುರ್ದೈವಿಗಳಾಗಿದ್ದಾರೆ.
ಮಧ್ಯಾಹ್ನ ಈರುಳ್ಳಿ ತುಂಬಿಕೊಂಡು ತೆರಳುತ್ತಿದ್ದ ಮ್ಯಾಕ್ಸಿ ಪಿಕಪ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಡಿಕ್ಕಿಯಾಗಿದೆ.
ಅತಿವೇಗವಾಗಿ ಬಂದ ಟ್ಯಾಂಕರ್ ನಿಯಂತ್ರಿಸಲಾಗದೇ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಸ್ಥಳಕ್ಕೆ ಗುಂಡ್ಲುಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.