ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಷಾ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಬಸವರಾಜ ಹೊರಟ್ಟಿ ಅವರು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಷಾ ಅವರನ್ನು ಭೇಟಿಯಾದರು.
ಈ ವೇಳೆ ಬಿಜೆಪಿ ಸೇರ್ಪಡೆಗೆ ಅಮಿತ್ ಷಾ ಗ್ರೀನ್ ಸಿಗ್ನಲ್ ನೀಡಿದರು.
ಅಮಿತ್ ಶಾ ಭೇಟಿ ಬಳಿಕ ಮಾತನಾಡಿದ ಬಸವರಾಜ ಹೊರಟ್ಟಿ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಬಿಜೆಪಿ ಸೇರ್ಪಡೆಗೆ ಅಮಿತ ಶಾ ಸಮ್ಮತಿಸಿದ್ದಾರೆ. ಜೆಡಿಎಸ್ ಬಗ್ಗೆ ನನಗೆ ಪ್ರೀತಿ ಕಡಿಮೆಯಾಗಿಲ್ಲ. ಕೆಲ ವ್ಯವಸ್ಥೆ ಬದಲಾವಣೆಗಾಗಿ ಜೆಡಿಎಸ್ ತೊರೆಯುತ್ತಿದ್ದೇನೆ ಎಂದು ಹೇಳಿದರು.
ಈ ವೇಳೆ ಕೇಂದ್ರ ಸಚಿವ ಪ್ರಹ್ಲಾದ ಜೋಷಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವರಾದ ಆರ್. ಅಶೋಕ್, ಅರಗ ಜ್ಞಾನೆಂದ್ರ , ಕೋಟ ಶ್ರೀನಿವಾಸ್ ಪೂಜಾರಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮತ್ತಿತರರು ಉಪಸ್ಥಿತರಿದ್ದರು.