ಯತ್ನಾಳ್ ಆರೋಪ ಕುರಿತು ಸಮಗ್ರ ತನಿಖೆ ನಡೆಸಿ -ಡಿಕೆಶಿ ಆಗ್ರಹ

ಹುಬ್ಬಳ್ಳಿ: ಮುಖ್ಯಮಂತ್ರಿ  ಸ್ಥಾನ ನೀಡಲು 2,500 ಕೋಟಿ ನೀಡುವಂತೆ ದೆಹಲಿ ಮೂಲದವರು ಬೇಡಿಕೆ ಇಟ್ಟಿದ್ದರು ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪದ ಕುರಿತು ಸಮಗ್ರ ತನಿಖೆ ನಡೆಯಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಒತ್ತಾಯಿಸಿದರು.

ಮಾಧ್ಯಮ ಪ್ರತಿ ನಿಧಿಗಳೊಂದಿಗೆ  ಮಾತನಾಡಿದ ಅವರು, ಮುಖ್ಯಮಂತ್ರಿ ಆಗಬೇಕಾದರೆ 2,500 ಕೋಟಿ, ಮಂತ್ರಿ ಆಗಬೇಕಾದರೆ 100 ಕೋಟಿ ಕೊಡಬೇಕು ಎಂದು ಯತ್ನಾಳ್ ಹೇಳಿದ್ದಾರೆ. ಅವರು  ಸಂಸದರೂ, ಕೇಂದ್ರ ಸಚಿವರೂ ಆಗಿದ್ದವರು. ಅವರ ಹೇಳಿಕೆಯನ್ನು ಹಗುರವಾಗಿ ಪರಿಗಣಿಸಬಾರದು ಎಂದು ತಿಳಿಸಿದರು.

ಈ ಬಗ್ಗೆ ರಾಷ್ಟ್ರ ಮಟ್ಟದಲ್ಲಿ ದೊಡ್ಡ ಚರ್ಚೆ ಆಗಬೇಕು ಎಂದು ಹೇಳಿದರು.

ಇಡೀ ಜಗತ್ತೇ ಬೆಚ್ಚಿ ಬೀಳುವ ಸುದ್ದಿಯಾಗಿದ್ದು ಬಿಜೆಪಿಗೆ ಬದ್ಧತೆ ಇದ್ದರೇ  ಸಮಗ್ರ ತನಿಖೆ ನಡೆಸಲಿ ಎಂದು ಆಗ್ರಹಿಸಿದರು.

ತನಿಖೆ ನಡೆಸದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.

ಈ ಸರ್ಕಾರ ಹುಟ್ಟಿದ್ದೇ ಶಾಸಕರನ್ನ  ಖರೀದಿ ಮಾಡುವ ಮೂಲಕ, ಪಿಎಸ್‌ಐ, ತಹಶೀಲ್ದಾರ್‌, ಲೋಕೋಪಯೋಗಿ ಇಲಾಖೆ  ಸೇರಿದಂತೆ ಎಲ್ಲ ಹುದ್ದೆಗಳಿಗೂ ಇಷ್ಟೆಂದು  ದರ ನಿಗದಿ ಮಾಡಲಾಗಿದೆ ಎಂದು ಡಿಕೆಶಿ ಆರೋಪಿಸಿದರು.