ರಾಯಚೂರು: ಉಪನ್ಯಾಸಕರೊಬ್ಬರನ್ನು ದೇವದುರ್ಗ-ಶಹಾಪೂರ ನಡು ರಸ್ತೆಯಲ್ಲಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ಮಾನಪ್ಪ ಗೋಪಳಾಪುರ(59) ಕೊಲೆಯಾದ ಉಪನ್ಯಾಸಕರು.
ಮಾನಪ್ಪ ಅವರು ದೇವದುರ್ಗದ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ನಿರ್ವಯಿಸುತ್ತಿದ್ದರು.
ಕೌಟುಂಬಿಕ ಕಲಹದ ಹಿನ್ನೆಲೆ ಕೊಲೆ ನಡೆದಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಯಾದಗಿರಿಯ ಶಹಾಪೂರ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.