ಧಾರವಾಡ: ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ
9 ಮಂದಿ ದುರ್ಮರಣ ಅಪ್ಪಿದ ಹೃದಯ ವಿದ್ರಾವಕ ಘಟನೆ ಧಾರವಾಡದ ಬಾಡಾ ಗ್ರಾಮದ ಬಳಿ ನಡೆದಿದೆ.
ಈ ದುರ್ದೈವಿಗಳು ಮದುವೆ ನಿಶ್ಚಿತಾರ್ಥ ಮುಗಿಸಿಕೊಂಡು ಬರುತ್ತಿದ್ದಾಗ ಈ ಘಟನೆ ನಡೆದಿದ್ದು, ಮೂವರು ಮಕ್ಕಳು ಸೇರಿ 9 ಮಂದಿ ಮೃತಪಟ್ಟಿದ್ದಾರೆ.ಈ ಘಟನೆ ಮುಂಜಾನೆ 1 ಗಂಟೆ ವೇಳೆ ಸಂಭವಿಸಿದೆ.
ಮಹೇಶ್ವರಯ್ಯ (11), ಹರೀಶ್ (13), ಅನನ್ಯ (14), ಶಿಲ್ಪಾ (34), ನೀಲವ್ವ (60), ಮಧುಶ್ರೀ (20), ಶಂಭುಲಿಂಗಯ್ಯ (35) ಮೃತಪಟ್ಟ ದುರ್ದೈವಿಗಳು.
ಅಪಘಾತದಲ್ಲಿ 13 ಮಂದಿ ಗಾಯಗೊಂಡಿದ್ದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಮನಸೂರು ಗ್ರಾಮದಿಂದ 21 ಜನರಿದ್ದ ಕ್ರೂಸರ್ ವಾಹನ ಬೆನಕನಹಟ್ಟಿಗೆ ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಪಿ. ಕೃಷ್ಣಕಾಂತ್ ಭೇಟಿ ನೀಡಿ ಪರಿಶೀಲಿಸಿದರು. ಅಪಘಾತಕ್ಕೆ ಕಾರಣ ತಿಳಿದು ಬಂದಿಲ್ಲ,ಚಾಲಕ ಓಡಿಹೋಗಿದ್ದು ಮಾಹಿತಿ ಕಲೆಹಾಕುತ್ತಿದ್ದೇವೆ ಎಂದು ತಿಳಿಸಿದರು.
ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಾಗಿದೆ.
ಅಪಘಾತದಲ್ಲಿ ವರನಕಡೆಯವರು ಸಾವನ್ನಪ್ಪಿದ್ದು ವಿವಾಹ ಮುರಿದುಬಿದ್ದಿದೆ.