ಚಾಮರಾಜನಗರ: ಕಾಂಗ್ರೆಸ್ನವರು ನಡೆಸುತ್ತಿರುವುದು ಹೋರಾಟವಲ್ಲ, ಅದು ರಾಜಕೀಯ ದೊಂಬರಾಟ ಎಂದು ಗಣಿ ಸಚಿವ ಹಾಲಪ್ಪ ಆಚಾರ್ ಟೀಕಿಸಿದರು.
ಚಾಮರಾಜನಗರದಲ್ಲಿ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮಾಡುತ್ತಿರುವುದನ್ನು ಹೋರಾಟ ಎನ್ನಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.
ರಾಜಕೀಯ ಲಾಭಕ್ಕೆ ಈ ನಾಟಕ ಆಡುತ್ತಿದ್ದಾರೆ. ಇದು ಅಸಹಾಯಕರಾಗಿ ಜನರ ಗಮನ ಬೇರೆಡೆ ಸೆಳೆಯುವ ನಾಟಕ ಎಂದು ಹೇಳಿದರು.
ರಾಹುಲ್ ಗಾಂಧಿಯನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುತ್ತಿರುವುದು ಆ ಸಂಸ್ಥೆಯ ಸ್ವಾತಂತ್ರ್ಯ.
ಕಾಂಗ್ರೆಸ್ ಹೋರಾಟದಲ್ಲಿ ಯಾವುದೇ ರೀತಿಯ ಹುರುಳಿಲ್ಲ. ಅವರಿಗೆ ಸಂವಿಧಾನದ ಮೇಲೆ ನಂಬಿಕೆಯಿಲ್ಲ ಎಂದು ಟೀಕಿಸಿದರು.
ಮಡಹಳ್ಳಿ ಗುಡ್ಡ ಕುಸಿತಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ನಮ್ಮ ಇಲಾಖೆಯಿಂದ ಸೂಕ್ತ ತನಿಖೆ ಮಾಡಿ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.
ಪ್ರಮುಖ ಆರೋಪಿಯನ್ನು ಬಂಧಿಸಬೇಕಾದ್ದು ಪೊಲೀಸ್ ಇಲಾಖೆಯ ಜವಾಬ್ದಾರಿ, ಆದರೆ ಅದನ್ನೇಕೆ ಮಾಡಿಲ್ಲ ಅನ್ನೋದು ನನಗೆ ಗೊತ್ತಿಲ್ಲ. ನಮ್ಮ ಕೆಲಸ ನಾವು ಮಾಡಿದ್ದೇವೆ ಎಂದು ಹೆಬ್ಬಾರ್ ಹೇಳಿದರು.