ಮೈಸೂರು: ಮೈಸೂರು ಜಿಲ್ಲಾ ಪಂಚಾಯತಿ ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ವರ್ಗಾವಣೆ ಮಾಡಲಾಗಿದೆ.
ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ವರ್ಗಾವಣೆ ಮಾಡಲಾಗಿದೆ ಎನ್ನಲಾಗಿದೆ.
ವರ್ಗಾವಣೆಗೊಂಡಿರುವ ಪ್ರಶಾಂತ್ ಮಿಶ್ರಾ ಅವರಿಗೆ ಸರ್ಕಾರ ಯಾವುದೇ ಸ್ಥಳ ನಿಗದಿಪಡಿಸಿಲ್ಲ.
ಜಿಪಂ ಸಿಇಒ ವಿರುದ್ಧ ಡಾ.ನಾಗೇಂದ್ರ ಅವರ ತಂದೆ ರಾಮಕೃಷ್ಣ ಅವರು ನೀಡಿದ ದೂರಿನ ಮೇರೆಗೆ ಪ್ರಶಾಂತ್ ಮಿಶ್ರಾ ವಿರುದ್ಧ ಆಲನಹಳ್ಳಿ ಪೆÇಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ನಾಗೇಂದ್ರ ಅವರು ನಗರದ ಆಲನಹಳ್ಳಿ ಬಡಾವಣೆಯಲ್ಲಿರುವ ತಮ್ಮ ನಿವಾಸದಲ್ಲಿ ಆ. 20ರಂದು ಸಾವಿಗೆ ಶರಣಾಗಿದ್ದರು.