ಶಿವಮೊಗ್ಗ: ಶಿವಮೊಗ್ಗದಲ್ಲಿ ಬೆಳ್ಳಂಬೆಳಿಗ್ಗೆ ರೌಡಿ ಶೀಟರ್ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದ್ದು ಜನತೆ ಬೆಚ್ಚಿಬಿದ್ದಿದ್ದಾರೆ.
ಮನು ಆಲಿಯಾಸ್ ಹಂದಿ ಹಣಿ ಎಂಬ ರೌಡಿ ಶೀಟರ್ ನನ್ನು ವಿನೋಬನಗರದಲ್ಲಿ ಗುರುವಾರ ಬೆಳಗ್ಗೆ ಭಯಾನಕವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ.
ಬೆಳಗ್ಗೆ ಸುಮಾರು ಹತ್ತು ಮೂವತ್ತರ ವೇಳೆ ಇನೋವಾ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಹಂದಿ ಹಣಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ಸಾಗರ ರಸ್ತೆಯಲ್ಲಿರುವ ನಿವೇಶನ ಒಂದರ ವಿವಾದಕ್ಕೆ ಸಂಬಂಧಿಸಿದಂತೆ ಈ ಕೊಲೆ ನಡೆದಿದೆ, ಸುಮಾರು ನಾಲ್ಕರಿಂದ ಐದು ಮಂದಿ ದುಷ್ಕರ್ಮಿಗಳು ಈ ಕೃತ್ಯ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.