ಮೈಸೂರು: ಬೆಳ್ಳಂ ಬೆಳಿಗ್ಗೆ ಮಹಿಳೆಯೊಬ್ಬರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಂಜನಗೂಡು ತಾಲೂಕು ಹಳೇಪುರ ಗ್ರಾಮದಲ್ಲಿ ನಡೆದಿದೆ.
ಹಾಲು ತರಲು ಹೋಗಿದ್ದಾಗ ಹಳೇಪುರ ಗ್ರಾಮದ ಮಿಣುಕಮ್ಮ(45) ಎಂಬ ಮಹಿಳೆಯನ್ನು ಕೊಲೆ ಮಾಡಲಾಗಿದೆ.
ಅದೇ ಗ್ರಾಮದ ಮಹದೇವನಾಯಕ ಮಿಣುಕಮ್ಮನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.
ಮಿಣುಕಮ್ಮ ಹಾಗೂ ಮಹದೇವನಾಯಕ ನಡುವೆ ಅಕ್ರಮ ಸಂಬಂಧ ಇತ್ತು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಇತ್ತೀಚೆಗೆ ಮಿಣುಕಮ್ಮ ಮತ್ತೊಬ್ಬ ವ್ಯಕ್ತಿಯೊಂದಿಗೆ ಸಂಬಂಧ ಬೆಳೆಸಿದ್ದಳು. ಇದರಿಂದ ಆಕ್ರೋಶಗೊಂಡ ಮಹದೇವನಾಯಕ ಶುಕ್ರವಾರ ಬೆಳಿಗ್ಗೆ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.
ಇದನ್ನು ಮಗ ನೋಡಿದ ಕಾರಣ ಸ್ಥಳದಿಂದ ಪರಾರಿಯಾಗಿದ್ದಾನೆ.
ಸ್ಥಳಕ್ಕೆ ಕವಲಂದೆ ಠಾಣೆಯ ಸಬ್ ಇನ್ಸಪೆಕ್ಟರ್ ಮಹೇಂದ್ರ, ಸರ್ಕಲ್ ಇನ್ಸಪೆಕ್ಟರ್ ತಳವಾರ್ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.