ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ
ಚಾಮರಾಜನಗರ: ಹುಟ್ಟುಹಬ್ಬದ ದಿನವೇ ಉಪನ್ಯಾಸಕಿ ನೇಣಿಗೆ ಕೊರಳೊಡ್ಡಿರುವ ಘಟನೆ ಚಾಮರಾಜನಗರ ಜೆಎಸ್‍ಎಸ್ ಸಂಸ್ಥೆಯ ವಸತಿನಿಲಯದಲ್ಲಿ ಇಂದು ನಡೆದಿದೆ.
ಜೆಎಸ್‍ಎಸ್ ಪದವಿ ಕಾಲೇಜಿನಲ್ಲಿ ಉಪನ್ಯಾಸಕಿ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಚಂದನಾ ( 26 ) ಎಂಬಾಕೆಯೆ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾರೆ.
ಚಂದನಾ ಯಳಂದೂರು ತಾಲೂಕಿನ ಅಂಬಳೆ ಗ್ರಾಮದ ನಿವಾಸಿ ಮಹದೇವಸ್ವಾಮಿ ಎಂಬುವವರ ಮಗಳಾಗಿದ್ದು, ಮಾನಸಿಕ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ, ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್‍ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದಾರೆ.
ಚಾಮರಾಜನಗರ ಪಟ್ಟಣ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಜೆಎಸ್‍ಎಸ್ ವಸತಿನಿಲಯದಲ್ಲಿ ಹುಟ್ಟುಹಬ್ಬದ ದಿನವೇ ಚಂದನಾ ಆತ್ಮಹತ್ಯೆ ಮಾಡಿಕೊಂಡಿದ್ದು ವಿಪರ್ಯಾಸವಾಗಿದೆ.