ಪೊಲೀಸ್ ಠಾಣೆಯನ್ನು ಬಿಡದ ವರುಣರಾಯ

ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ    
ಚಾಮರಾಜನಗರ: ಹಗಲು ರಾತ್ರಿ ಎನ್ನದೆ ಇಡೀ ದಿನ ಬಿಟ್ಟುಬಿಡದೇ ಸುರಿದ ಮಳೆಯಿಂದಾಗಿ ಗಡಿಜಿಲ್ಲೆ ಚಾಮರಾಜನಗರದಲ್ಲಿ ಪೊಲೀಸ್ ಠಾಣೆಯನ್ನೂ ಬಿಡದೆ  ವರುಣ ಅವಾಂತರ ಸೃಷ್ಟಿಸಿದ್ದಾನೆ‌. 
ಯಳಂದೂರು ತಾಲೂಕಿನಲ್ಲಿರುವ ಮಾಂಬಳ್ಳಿ ಪೊಲೀಸ್ ಠಾಣೆಗೆ ನೀರು ನುಗ್ಗಿ ಇಡೀ ಠಾಣೆಯೇ ಜಲಾವೃತವಾಗಿ ದ್ವೀಪದಂತಾಗಿದೆ.
ಇಡೀ ಠಾಣೆ ತುಂಬೆಲ್ಲಾ ಮಂಡಿ, ಸೊಂಟದೆತ್ತರಕ್ಜೆ ನೀರು ನಿಂತು ಅವಾಂತರ ಸೃಷ್ಟಿಸಿದೆ. 
ಮೊಣಕಾಲುದ್ದ ನಿಂತಿರುವ ನೀರಿನಲ್ಲಿ ಪೊಲೀಸ್ ಕಾನ್​ಸ್ಟೆಬಲ್‌ ಒಬ್ಬರು ಠಾಣೆಯಲ್ಲಿ ಫಜೀತಿ ಅನುಭವಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. 
ಸೋಮವಾರ ಸಂಜೆ ಮಳೆ ಹಾನಿ ಪರಿಶೀಲನೆಗೆ ಹೋಗಿ ಅಧಿಕಾರಿಗಳು ಹಳ್ಳದ ನೀರಿನಲ್ಲಿ ಸಿಲುಕಿಕೊಂಡು ಕೊನೆಗೆ ಸ್ಥಳೀಯರಿಂದ ರಕ್ಷಿಸಲ್ಪಟ್ಟ ಘಟನೆ ಚಾಮರಾಜನಗರ ತಾಲೂಕಿನ ಕಣ್ಣೆಗಾಲ - ಆಲೂರು ಘಟನೆ ನಡೆದಿದೆ. 
ಸ್ಥಳೀಯರು ನೀರಿನಲ್ಲಿ ಮುಳುಗಿದ ಕಾರಿಗೆ ಹಗ್ಗ ಕಟ್ಟಿ ಎಳೆದು ಅಧಿಕಾರಿಗಳನ್ನು ರಕ್ಷಿಸಿದ್ದಾರೆ. ಎಇಇ ಕಾಂತರಾಜ್, ಎಇ ರಾಜು, ಚಾಲಕ ಮುರುಗೇಶ್ ಅವರನ್ನು ರಕ್ಷಿಸಲಾಗಿದೆ.
ಸುರಿಯುತ್ತಿರುವ ನಿರಂತರ ಮಳೆಗೆ ಹನೂರು ತಾಲೂಕಿನ ಗುಂಡಾಲ್ ಜಲಾಶಯ ಕೋಡಿ ಬಿದ್ದಿದೆ.