ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

ಹೊಸದಿಲ್ಲಿ: ದೆಹಲಿಯ ಸಫ್ದರ್‍ ಜಂಗ್ ಆಸ್ಪತ್ರೆಯ ಅಂತಿಮ ವರ್ಷದ ವಿದ್ಯಾರ್ಥಿನಿ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ದೆಹಲಿಯ ನಿವಾಸಿಯಾಗಿರುವ ವಿದ್ಯಾರ್ಥಿನಿ ಸಫ್ದರ್‍ಜಂಗ್ ಆಸ್ಪತ್ರೆಯ ಎಂಬಿಬಿಎಸ್ ಬಾಲಕಿಯರ ಹಾಸ್ಟೆಲ್‍ನಲ್ಲಿದ್ದುಕೊಂಡು ಎಂಬಿಬಿಸ್ ಇಂಟರ್ನ್‍ಶಿಪ್ ಮಾಡುತ್ತಿದ್ದರು.

ಗುರುವಾರ ಮುಂಜಾನೆ ಆಕೆ ಹಾಸ್ಟೆಲ್‍ನ ಕೊಠಡಿಯಲ್ಲಿ ಸ್ಕಾರ್ಫ್‍ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಉಪ ಆಯುಕ್ತ (ನೈಋತ್ಯ) ಮನೋಜ್ ಸಿ ತಿಳಿಸಿದ್ದಾರೆ.

ಕೋಣೆಗೆ ಒಳಗಿನಿಂದ ಬೀಗ ಹಾಕಲಾಗಿತ್ತು ಬಹಳ ಹೊತ್ತಾದರೂ ಬಾಗಿಲು ತೆಗೆಯದ ಕಾರಣ ಆಕೆಯ ಸ್ನೇಹಿತರು ಬಲವಂತವಾಗಿ ಬಾಗಿಲು ತೆರೆದಿದ್ದಾರೆ.

ತಕ್ಷಣ ವಿದ್ಯಾರ್ಥಿನಿಯನ್ನು ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗಕ್ಕೆ ಕರೆದೊಯ್ಯಲಾಗಿದೆ ಆದರೆ ಅಲ್ಲಿಗೆ ಬರುವಷ್ಟರಲ್ಲಿ ಆಕೆ ಮೃತಪಟ್ಟಿದ್ದಾಳೆ.

ಮೃತರ ಡೈರಿಯಲ್ಲಿ ಕೈಬರಹದ ಸೂಸೈಡ್ ನೋಟ್ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಠಡಿಯೊಳಗೆ ಖಿನ್ನತೆ-ಶಮನಕಾರಿ ಔಷಧದ ಎರಡು ಖಾಲಿ ಪ್ಯಾಕೆಟ್ ಪತ್ತೆಯಾಗಿವೆ.

ಆಕೆಯ ಸ್ನೇಹಿತರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ.

ಮೃತರ ಕುಟುಂಬಸ್ಥರು ಕೂಡ ಸ್ಥಳಕ್ಕೆ ಆಗಮಿಸಿದ್ದು, ಅವರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುತ್ತಿದೆ. ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಸಧ್ಯಕ್ಕೆ ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ