ಬೆಂಗಳೂರು: ಮುಂಗಾರು ಅಧಿವೇಶನವನ್ನು ಬೆಂಗಳೂರಿನ ವಿಧಾನಸೌಧದಲ್ಲೇ ನಡೆಸಲಾಗುವುದು ಎಂದು ಕಾನೂನು ಸಚಿವ ಜೆಸಿ ಮಾಧುಸ್ವಾಮಿ ಅವರು ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸೋಮವಾರ ಸಚಿವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಈ ಬಾರಿ ವಿಧಾನಸೌಧದಲ್ಲೇ ಮುಂಗಾರು ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಕೊರೊನಾ ಮಾರ್ಗಸೂಚಿ ಪಾಲಿಸಿ ಅಧಿವೇಶನ ನಡೆಸಲಾಗುವುದು ಎಂದರು.
ಪ್ರತೀ ಶಾಸಕರಿಗೂ ಫೇಸ್ ಶೀಲ್ಡ್, ಮಾಸ್ಕ್ ನೀಡಲಾಗುವುದು ಎಂದು ಹೇಳಿದರು.
ಹಿರಿಯ ಅಧಿಕಾರಿಗಳು ಮತ್ತು ಪ್ರಧಾನ ಕಾರ್ಯದರ್ಶಿಯಂತಹ ಅಧಿಕಾರಿಗಳಿಗೆ ಮಾತ್ರ ಪ್ರವೇಶಕಲ್ಪಿಸಲಾಗುತ್ತದೆ. ಇಲಾಖೆಗೆ ಒಬ್ಬ ಅಧಿಕಾರಿ ಮಾತ್ರ ಸದನಕ್ಕೆ ಬರಲು ಅವಕಾಶ ನೀಡಲಾಗಿದೆ ಎಂದು ಕಾನೂನು ಸಚಿವರು ಹೇಳಿದರು.
ಪತ್ರಕರ್ತರಿಗೆ ಎರಡು ಗ್ಯಾಲರಿ ಮಾಡಲು ತೀರ್ಮಾನಿಸಲಾಗಿದೆ.
ಈ ಬಾರಿ ಅಧಿವೇಶನ ವೀಕ್ಷಿಸಲು ಸಾರ್ವಜನಿಕರಿಗೆ ಅವಕಾಶ ನೀಡದಿರಲು ತೀರ್ಮಾನಿಸಲಾಗಿದೆ ಎಂದರು.