ಬಿಜೆಪಿಗರು ಕತ್ತರಿ ಇದ್ದಂತೆ ಎಲ್ಲರನ್ನು ಇಬ್ಭಾಗ ಮಾಡುತ್ತಾರೆ: ಡಿಕೆಶಿ ತಿರುಗೇಟು

ಚಾಮರಾಜನಗರ: ರಾಹುಲ್ ಗಾಂಧಿ ಐರನ್ ಲೆಗ್, ಬಿಜೆಪಿಗೆ ಇದರಿಂದ ಲಾಭ ಎಂಬ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತೀಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ರಾಹುಲ್ ಗಾಂಧಿ ಕಬ್ಬಿಣದ ಸೂಜಿ ಇದ್ದಂತೆ ಎಲ್ಲರನ್ನೂ ಒಂದುಗೂಡಿಸಿಕೊಂಡು ಬರುತ್ತಿದ್ದಾರೆ. ಬಿಜೆಪಿಗರು ಕತ್ತರಿ ಇದ್ದಂತೆ ಎಲ್ಲರನ್ನು ಇಬ್ಭಾಗ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಸೆ.30 ರಿಂದ ರಾಜ್ಯದಲ್ಲಿ ಆರಂಭಗೊಳ್ಳುವ ಭಾರತ್ ಜೋಡೋ ಯಾತ್ರೆಯ ಮಾರ್ಗವನ್ನು ಪರಿಶೀಲನೆ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಡಿ.ಕೆ.ಶಿ ಮಾತನಾಡಿದರು.

ತಮಿಳುನಾಡಿನ ಗೂಡ್ಲೂರಿನಿಂದ ಕರ್ನಾಟಕಕ್ಕೆ ರಾಹುಲ್ ಗಾಂಧಿ ಆಗಮಿಸಿ ಗುಂಡ್ಲುಪೇಟೆಯಲ್ಲಿ 9 ಗಂಟೆಗೆ ಸಾರ್ವಜನಿಕ ಸಭೆ ನಡೆಸಿ ಪಾದಯಾತ್ರೆ ನಡೆಸಲಿದ್ದಾರೆ.

ರಾಜ್ಯದ ಎಲ್ಲಾ ನಾಯಕರು ಅಂದು ರಾಗಾ ಜೊತೆ ಹೆಜ್ಜೆ ಹಾಕಲಿದ್ದಾರೆ. ಆಕ್ಸಿಜನ್ ದುರಂತದ ಸಂತ್ರಸ್ತರೊಂದಿಗೆ ಸಂವಾದ ನಡೆಸಲು ಯೋಜಿಸಲಾಗುತ್ತಿದೆ. ಜನರು ಕೂಡಾ ಪಾದಯಾತ್ರೆಗೆ ಬರಲು ಉತ್ಸುಕರಾಗಿದ್ದಾರೆ ಎಂದು ಡಿಕೆಶಿ ಹೇಳಿದರು.