‘ಪೇಸಿಎಂ’ ಟೀ ಶರ್ಟ್ ಧರಿಸಿದ್ದ ಯುವಕ ಬಂಧನ

ವರದಿ : ರಾಮಸಮುದ್ರ ಎಸ್.ವೀರಭದ್ರಸ್ವಾಮಿ      

ಚಾಮರಾಜನಗರ: ರಾಜ್ಯದಲ್ಲಿ 2ನೇ ದಿನಕ್ಕೆ ಕಾಲಿಟ್ಟಿರುವ ಭಾರತ್ ಜೋಡೋ ಯಾತ್ರೆಯಲ್ಲಿ ‘ಪೇಸಿಎಂ’ ಟೀ ಶರ್ಟ್ ಧರಿಸಿದ್ದ ಯುವಕನೋರ್ವನ್ನು  ಚಾಮರಾಜನಗರ ಪೊಲೀಸರು ಬಂಧಿಸಿದ್ದಾರೆ.

ಇಂದು (ಶನಿವಾರ) ಕೂಡ ಭಾರತ್ ಜೊಡೋ ಯಾತ್ರೆಯಲ್ಲಿ ಭಾಗವಹಿಸಿದ್ದ ಅಕ್ಷಯ್ ಕುಮಾರ್, ಪೇಸಿಎಂ ಟೀ ಶರ್ಟ್ ಧರಿಸಿದ್ದನು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ ಶಿವಕುಮಾರ್ ನೇತೃತ್ವದ ಪೊಲೀಸರ ತಂಡ, ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇಗೂರು ಸಮೀಪ ಯವಕನನ್ನು ಬಂಧಿಸಿದ್ದಾರೆ.

ವಿಜಯಪುರ ಮೂಲದ ಅಕ್ಷಯ್ ಕುಮಾರ್ ಬಂಧಿತ ಯುವಕನಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭಾವ ಚಿತ್ರ ಇರುವ ಟೀ ಶರ್ಟ್ ಧರಿಸಿ ಮುಖ್ಯಮಂತ್ರಿಗಳಿಗೆ ಅವಮಾನ ಮಾಡಿದ್ದಾನೆಂಬ ಆರೋಪದ ಮೇಲೆ ಈತನ ವಿರುದ್ಧ ಚಾಮರಾಜನಗರ ಸೆನ್ ಠಾಣೆಯಲ್ಲಿ ಕಿರಣ್ ಎಂಬವರು ದೂರು ನೀಡಿದ್ದರು. ಈ ಸಂಬಂಧ ಪ್ರಕರಣ ಕೂಡ ದಾಖಲಾಗಿತ್ತು.